Mysore
26
clear sky

Social Media

ಸೋಮವಾರ, 29 ಡಿಸೆಂಬರ್ 2025
Light
Dark

ಹೈದರಾಬಾದ್ ಬೆಂಗಳೂರು ಕೈಗಾರಿಕಾ ಕಾರಿಡಾರ್ ನಿರ್ಮಾಣ

ನವದೆಹಲಿ : ವಿಶಾಖಪಟ್ಟಣ ಚೆನ್ನೈ ಕೈಗಾರಿಕಾ ಕಾರಿಡಾರ್‌, ಹೈದರಾಬಾದ್ ಬೆಂಗಳೂರು‌ ಕೈಗಾರಿಕಾ ಕಾರಿಡಾರ್‌ ನಿರ್ಮಾಣ ಮಾಡುವುದಾಗಿ ಬಜೆಟ್‌ ನಲ್ಲಿ ನಿರ್ಮಲಾ ಸೀತಾರಾಮನ್‌ ಘೋಷಣೆ ಮಾಡಿದ್ದಾರೆ.

೨೬ ಸಾವಿರ ಕೋಟಿ ವೆಚ್ಚದಲ್ಲಿ ರೈಲು ಯೋಜನೆಗಳ ಆರಂಭ, ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಲಾಗುವುದು. ಆಂಧ್ರಪ್ರದೇಶದ ಸರ್ವಾಂಗೀಣ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದರು. ಅಲ್ಲದೆ ಇಂಧನ ರೈಲು ರಸ್ತೆ ಅಭಿವೃದ್ಧಿಗಾಗಿ ಆದ್ಯತೆ ನೀಡಲಾಗುವುದು, ಪೋಲಾವರಂ ಪ್ರಾಜೆಕ್ಟ್‌ ಗೆ ಕೇಂದ್ರ ಸರ್ಕಾರದಿಂದ ಅನುದಾನ ನೀಡಲಾಗುವುದು ಎಂದು ತಿಳಿಸಿದರು.

೪.೧ ಕೋಟಿ ಯುವಕರಿಗೆ ಉದ್ಯೋಗಕ್ಕೆ ಯೋಜನೆ

೫ ವರ್ಷಗಳಲ್ಲಿ ೪.೧ ಕೋಟಿ ಯುವಕರಿಗೆ ಉದ್ಯೋಗ, ಕೌಶಲ್ಯ  ಮತ್ತು ಇತರ ಅವಕಾಶಗಳನ್ನು ಒದಗಿಸುವ ೫ ಯೋಜನೆಗಳು ಮತ್ತು ಉಪಕ್ರಮಗಳಿಗೆ ಪ್ರಧಾನ ಮಂತ್ರಿಗಳ ಪ್ಯಾಕೇಜ್‌ ಅನ್ನು ಘೋಷಿಸಲು ಸಂತೋಷವಾಗಿದೆ. ಈ ವರ್ಷ ನಾವು ಶಿಕ್ಷಣ ಉದ್ಯೋಗ ಮತ್ತು ಕೌಶಲ್ಯಕ್ಕಾಗಿ ೧.೪೮ ಲಕ್ಷ ಕೋಟಿ ರೂಪಾಯಿ ನೀಡಲಿದ್ದೇವೆ ಎಂದು ಹೇಳಿದರು.

 

Tags:
error: Content is protected !!