Mysore
30
few clouds

Social Media

ಸೋಮವಾರ, 13 ಏಪ್ರಿಲ 2026
Light
Dark

ಕೇಂದ್ರ ಬಜೆಟ್‌ನಲ್ಲಿ ಬಿಹಾರ ಹಾಗೂ ಆಂಧ್ರಪ್ರದೇಶಕ್ಕೆ ಬಂಪರ್‌ ಘೋಷಣೆ

ನವದೆಹಲಿ: ಎನ್‌ಡಿಎಗೆ ಬೆಂಬಲ ನೀಡಿದ ಬಿಹಾರ ಹಾಗೂ ಆಂಧ್ರಪ್ರದೇಶ ಸರ್ಕಾರಕ್ಕೆ ಕೇಂದ್ರ ಬಜೆಟ್‌ನಲ್ಲಿ ಬಂಪರ್‌ ಘೋಷಣೆ ಮಾಡಲಾಗಿದೆ.

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮೂರನೇ ಅವಧಿಗೆ ಜಾರಿಗೆ ಬರಲು ಬಿಹಾರ ಹಾಗೂ ಆಂಧ್ರಪ್ರದೇಶ ಸರ್ಕಾರದ ಪಾತ್ರ ಪ್ರಮುಖವಾಗಿದೆ.

ಈ ಹಿನ್ನೆಲೆಯಲ್ಲಿ ಬಿಹಾರ ಹಾಗೂ ಆಂಧ್ರಪ್ರದೇಶಕ್ಕೆ ಕೇಂದ್ರ ಬಜೆಟ್‌ನಲ್ಲಿ ಬಂಪರ್‌ ಆಫರ್‌ ಘೋಷಣೆ ಮಾಡಲಾಗಿದ್ದು, ಬಿಹಾರಕ್ಕೆ ಎಕ್ಸ್‌ಪ್ರೆಸ್‌ ರಸ್ತೆ ಯೋಜನೆ ಘೋಷಣೆ ಮಾಡಲಾಗಿದೆ.

ಇದರ ಜೊತೆಗೆ ಬಿಹಾರಕ್ಕೆ ಹೊಸ ಏರ್‌ಪೋರ್ಟ್‌ ಮತ್ತು ಮೆಡಿಕಲ್‌ ಕಾಲೇಜನ್ನು ಘೋಷಣೆ ಮಾಡಲಾಗಿದ್ದು, ಅಮೃತ್‌ಸರ್‌-ಗಯಾ ಆರ್ಥಿಕ ಕಾರಿಡಾರ್‌ ಕೂಡ ಘೋಷಣೆ ಮಾಡಲಾಗಿದೆ.

ಇನ್ನು ಆಂಧ್ರಪ್ರದೇಶಕ್ಕೆ 1500 ಸಾವಿರ ಕೋಟಿ ವಿಶೇಷ ಪ್ಯಾಕೇಜ್‌ ಘೋಷಣೆ ಮಾಡಲಾಗಿದ್ದು, ಆಂಧ್ರಪ್ರದೇಶದ ರಾಜಧಾನಿ ಅಮರಾವತಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್‌ ಘೋಷಣೆ ಮಾಡಲಾಗಿದೆ. ಇದರ ಜೊತೆಗೆ ಆಂಧ್ರಪ್ರದೇಶದ ಪುನರ್‌ ನಿರ್ಮಾಣಕ್ಕೆ ಎಲ್ಲಾ ರೀತಿಯ ಬೆಂಬಲ ಘೋಷಿಸಲಾಗಿದೆ.

ಇನ್ನು ನೀರು ಮತ್ತು ವಿದ್ಯುತ್‌ ಯೋಜನೆಗಳಲ್ಲಿ ಆಂಧ್ರಪ್ರದೇಶಕ್ಕೆ ವಿಶೇಷ ಅನುದಾನ ನೀಡಲಾಗಿದ್ದು, ಮಿತ್ರಕೂಟಗಳಿಗೆ ಮೋದಿ ಸರ್ಕಾರ ಬಜೆಟ್‌ನಲ್ಲಿ ಬಂಪರ್‌ ಕೊಡುಗೆ ನೀಡಿದೆ.

 

 

Tags:
error: Content is protected !!