Mysore
20
overcast clouds

Social Media

ಶನಿವಾರ, 15 ಆಗಸ್ಟ್ 2026
Light
Dark

ಕೇಂದ್ರ ಬಜೆಟ್‌ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ತೀವ್ರ ಆಕ್ರೋಶ

ಬೆಂಗಳೂರು: ಕೇಂದ್ರ ಬಜೆಟ್‌ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಲೇವಡಿ ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಿಡಿಕಾರಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು, ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಬಗ್ಗೆ ಬಹಳ ನಿರೀಕ್ಷೆ ಇತ್ತು. ಆದರೆ ನಿರ್ಮಲಾ ಸೀತಾರಾಮನ್‌ ಅವರು ನಮ್ಮ ನಿರೀಕ್ಷೆಯನ್ನು ಹುಸಿ ಮಾಡಿದ್ದಾರೆ. ಇದು ಕೇವಲ ಆಂಧ್ರಪ್ರದೇಶ ಹಾಗೂ ಬಿಹಾರ ಬಜೆಟ್‌ ಎಂದು ತೀವ್ರ ಕಿಡಿಕಾರಿದರು.

ಇನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಬೇರೆ ರಾಜ್ಯಗಳನ್ನು ಗಮನಿಸಿಲ್ಲ. ಕಾಂಗ್ರೆಸ್‌ ಸರ್ಕಾರವಿರುವ ರಾಜ್ಯಗಳನ್ನು ಬಜೆಟ್‌ನಲ್ಲಿ ಪರಿಗಣನೆಗೆ ತೆಗೆದುಕೊಂಡಿಲ್ಲ. ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಮಲತಾಯಿ ಧೋರಣೆ ತೋರಿದೆ ಎಂದು ಕಿಡಿಕಾರಿದರು.

Tags:
error: Content is protected !!