Mysore
23
light rain

Social Media

ಮಂಗಳವಾರ, 29 ಸೆಪ್ಟೆಂಬರ್ 2026
Light
Dark

ಬಿಹಾರ ಮಾಜಿ ಸಿಎಂ ಲಾಲು ಪ್ರಸಾದ್‌ ಯಾದವ್‌ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ನವದೆಹಲಿ: ಬಿಹಾರ ಮಾಜಿ ಸಿಎಂ ಹಾಗೂ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್‌ ಯಾದವ್‌ ಆರೋಗ್ಯದಲ್ಲಿ ಏರುಪೇರಾಗಿದ್ದು, ದೆಹಲಿಯ ಏಮ್ಸ್‌ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

ಸದ್ಯ ವೈದ್ಯರ ನಿಗಾದಲ್ಲಿರುವ ಲಾಲು ಪ್ರಸಾದ್‌ ಯಾದವ್‌ ಅವರ ಆರೋಗ್ಯ ಸ್ಥಿತಿ ಕೊಂಚ ಸುಧಾರಿಸಿದೆ ಎಂದು ಆಸ್ಪತ್ರೆಯ ಮೂಲಗಳಿಂದ ತಿಳಿದು ಬಂದಿದೆ. ಸದ್ಯ ಆಸ್ಪತ್ರೆಯಲ್ಲಿ ಕುಟುಂಬಸ್ಥರು ಕೂಡ ಹಾಜರಿದ್ದು, ಲಾಲೂ ಪ್ರಸಾದ್‌ ಅವರ ಆರೈಕೆಯಲ್ಲಿದ್ದಾರೆ.

ಈ ಬಗ್ಗೆ ಪ್ರಿನ್ಸ್‌ ಯಾದವ್‌ ಎಂಬುವವರು ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದು, ಲಾಲು ಪ್ರಸಾದ್‌ ಯಾದವ್‌ ಅವರು ಅನಾರೋಗ್ಯದ ಕಾರಣ ಏಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಬೇಗ ಗುಣಮುಖರಾಗಲಿ ಎಂದು ಬಿಹಾರದ ಎಲ್ಲಾ ಜನರು ದೇವರಲ್ಲಿ ಪ್ರಾರ್ಥಿಸುತ್ತಿದ್ದಾರೆ ಅಂತಾ ಬರೆದುಕೊಂಡಿದ್ದು, ಲಾಲು ಪ್ರಸಾದ್‌ ಯಾದವ್‌ ಅವರು ಆಸ್ಪತ್ರೆಯ ಬೆಡ್‌ನಲ್ಲಿರುವ ಫೋಟೋಗಳನ್ನು ಕೂಡ ಹಂಚಿಕೊಂಡಿದ್ದಾರೆ.

 

Tags:
error: Content is protected !!