ಬೆಂಗಳೂರು- ಮಂಡ್ಯದಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ 100 ಕೋಟಿ ರೂಪಾಯಿಗಳನ್ನು ಮೀಸಲಿರಿಸಲಾಗಿದ್ದು, 30 ಕೋಟಿ ರೂಪಾಯಿಗಳ ಬಿಡುಗಡೆಗೆ ಪ್ರಸ್ತಾವನೆ ಸಲ್ಲಿಕೆಯಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸತ್ವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ.
ವಿಧಾನಸಭೆಯ ಪ್ರಶ್ನೋತ್ತರದ ಅವಧಿಯಲ್ಲಿ ಮಂಡ್ಯ ಶಾಸಕ ರವಿಕುಮಾರ್ ಗಣಿಗ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಡಿಸೆಂಬರ್ 2021ರಂದು ಆಯೋಜಿಸಲಾಗಿರುವ ಸಾಹಿತ್ಯ ಸಮ್ಮೇಳನಕ್ಕೆ ಅನುದಾನ ಬಿಡುಗಡೆ ಮಾಡುವ ಕುರಿತು ಪರಿಶೀಲಿಸಲಾಗುತ್ತಿದೆ. ಈಗಾಗಲೇ 2024-25ನೇ ಸಾಲಿನ ಕ್ರಿಯಾ ಯೋಜನೆಯಲ್ಲಿ ಸಾಹಿತ್ಯ ಸಮ್ಮೇಳನಕ್ಕೆ ಅನುದಾನ ಮೀಸಲಿರಿಸಲಾಗಿದೆ ಎಂದು ಹೇಳಿದರು.