Mysore
26
overcast clouds

Social Media

ಮಂಗಳವಾರ, 22 ಸೆಪ್ಟೆಂಬರ್ 2026
Light
Dark

39 ಲಕ್ಷ ರೈತರಿಗೆ 3500 ಕೋಟಿ ರೂ ಬೆಳೆ ಹಾನಿ ಪರಿಹಾರ: ಸಚಿವ ಕೃಷ್ಣಭೈರೇಗೌಡ

ಬೆಂಗಳೂರು: ರಾಜ್ಯದಲ್ಲಿ ಭಾರೀ ಮಳೆಯಿಂದ ಹಾನಿಯಾದ ಬೆಳೆ ಹಾನಿ ಕುರಿತು ಕಂದಾಯ ಸಚಿವ ಕೃಷ್ಣಭೈರೇಗೌಡ ಪ್ರತಿಕ್ರಿಯೆ ನೀಡಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಳೆದ ವರ್ಷ ಮುಂಗಾರು ಹಾಗೂ ಹಿಂಗಾರು ಹಂಗಾಮಿನಲ್ಲಿ ಅತೀ ಮಳೆಯಿಂದ ಎಷ್ಟು ಹೆಕ್ಟೇರ್‌ ಪ್ರದೇಶ ಹಾನಿಯಾಗಿದೆ ಎಂಬುದನ್ನು ಅಂದಾಜಿಸಲಾಗಿದೆ. ಹಾನಿಯಾಗಿರುವ ಬಗ್ಗೆ ಸರ್ವೆಯನ್ನು ಸಹ ಮಾಡಲಾಗಿದೆ. ಭಾರೀ ಮಳೆ ಹಾನಿಯಿಂದ ಹಾನಿಯಾದ ಎಲ್ಲಾ ರೈತರ ಖಾತೆಗಳಿಗೂ ನೇರವಾಗಿ ಹಣ ಪಾವತಿಸಲಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಮಾಹಿತಿ ನೀಡಿದರು.

ಇನ್ನು ಮುಂದುವರಿದು ಮಾತನಾಡಿದ ಸಚಿವ ಕೃಷ್ಣಭೈರೇಗೌಡ ಅವರು, 39 ಲಕ್ಷ ರೈತರಿಗೆ 3500 ಕೋಟಿ ರೂ ಬೆಳೆ ಹಾನಿ ಪರಿಹಾರ ನೀಡಲಾಗುತ್ತದೆ. ಯಾವ ರೈತರು ಕೂಡ ಆತಂಕ ಪಡುವ ಅಗತ್ಯವಿಲ್ಲ. ಎಲ್ಲರ ಖಾತೆಗೂ ಸದ್ಯದಲ್ಲೇ ಬೆಳೆ ಹಾನಿ ಪರಿಹಾರ ಬರುತ್ತದೆ ಎಂದು ಸ್ಪಷ್ಟಪಡಿಸಿದರು.

ಕೇಂದ್ರ ಸರ್ಕಾರ ನಮಗೆ ನಯಾ ಪೈಸೆಗೂ ಬರ ಪರಿಹಾರ ಬಿಡುಗಡೆ ಮಾಡುತ್ತಿರಲಿಲ್ಲ. ಆದ್ದರಿಂದ ನಾವು ಸುಪ್ರೀಂ ಕೋರ್ಟ್‌ಗೆ ಅರ್ಜಿ ಹಾಕಿದ್ದೆವು. ಸುಪ್ರೀಂ ಕೋರ್ಟ್‌ ಸೂಚನೆ ನೀಡಿದ ಬಳಿಕವೇ ಕೇಂದ್ರ ಸರ್ಕಾರ ಬರ ಪರಿಹಾರ ನೀಡಿದೆ ಎಂದು ಕಿಡಿಕಾರಿದರು.

ಇನ್ನು ಸದ್ಯದಲ್ಲೇ ಬೆಳೆ ಹಾನಿ ಪರಿಹಾರ ರೈತರ ಖಾತೆಗಳಿಗೆ ಬರಲಿದೆ. ಯಾರೂ ಕೂಡ ಆತಂಕ ಪಡಬೇಡಿ. ನಮ್ಮ ಸರ್ಕಾರ ರೈತರ ಪರ ಇದೆ ಎಂದು ರೈತರಿಗೆ ಭರವಸೆ ನೀಡಿದರು.

 

Tags:
error: Content is protected !!