Mysore
24
scattered clouds

Social Media

ಸೋಮವಾರ, 12 ಜನವರಿ 2026
Light
Dark

ಓದುಗರ ಪತ್ರ| ಆರ್‌ಎಸ್‌ಎಸ್ ನಿರ್ಬಂಧ ಹಿಂಪಡೆದದ್ದು ಸ್ವಾಗತಾರ್ಹ

ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್)ದ ಕಾರ್ಯಕ್ರಮಗಳಲ್ಲಿ ಸರ್ಕಾರಿ ನೌಕರರು ಭಾಗವಹಿಸಬಾರದು ಎಂದು ನಿರ್ಬಂಧ ಹೇರಿತ್ತು. ಈ ನಿರ್ಬಂಧವನ್ನು ಬರೋಬ್ಬರಿ 58 ವರ್ಷಗಳ ಬಳಿಕ ಕೇಂದ್ರ ಬಿಜೆಪಿ ಸರ್ಕಾರ ಹಿಂಪಡೆದಿರುವುದು ಸ್ವಾಗತಾರ್ಹ.

ಕೋವಿಡ್, ಪ್ರವಾಹದಂತಹ ತುರ್ತು ಸಂದರ್ಭಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತರು ಜನರಿಗೆ ನೆರವಾಗಿದ್ದಾರೆ. ದೇಶದಾದ್ಯಂತ ತನ್ನ ಕಾರ್ಯಕರ್ತರ ಬಳಗವನ್ನು ಹೊಂದಿರುವ ಆರ್‌ಎಸ್‌ಎಸ್ ಅನೇಕ ಸಾಮಾಜಿಕ ಕೆಲಸಗಳಲ್ಲಿ ತನ್ನನ್ನು ತೊಡಗಿಸಿ ಕೊಂಡಿದೆ. ಆದರೆ, ಯಾವ ಉದ್ದೇಶದಿಂದಲೋ ಏನೋ ಇಂತಹ ಆರ್‌ಎಸ್‌ಎಸ್‌ನ ಕಾರ್ಯಚಟುವಟಿಕೆಗಳಲ್ಲಿ ಸರ್ಕಾರಿ ನೌಕರರು ಭಾಗವಹಿಸಿದಂತೆ ಕಾಂಗ್ರೆಸ್ ಸರ್ಕಾರ ನಿರ್ಬಂಧ ಹೇರಿತ್ತು. ಈಗ ಸರ್ಕಾರ ಈ ನಿರ್ಬಂಧವನ್ನು ಹಿಂಪಡೆದು, ಸರ್ಕಾರಿ ನೌಕರರು ಈ ಸಂಘಟನೆಯ ಮೂಲಕ ಸಮಾಜ ಸೇವಾ ಕಾರ್ಯಗಳಲ್ಲಿ ತೊಡಗಿಕೊಳ್ಳಲು ಅವಕಾಶ ಕಲ್ಪಿಸಿದೆ.
-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ.

Tags:
error: Content is protected !!