Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಚಾಮುಂಡಿಬೆಟ್ಟದಲ್ಲಿ ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ಚಾಲನೆ ನೀಡಿದ ರಾಜವಂಶಸ್ಥ ಯದುವೀರ್‌ ಒಡೆಯರ್‌

ಮೈಸೂರು: ಇಂದು ನಾಡ ಅಧಿದೇವತೆ ಚಾಮುಂಡೇಶ್ವರಿಯ ವರ್ಧಂತಿ ಮಹೋತ್ಸವದ ಅಂಗವಾಗಿ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು, ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ಚಾಲನೆ ನೀಡಿದರು.

ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವದ ಪ್ರಯುಕ್ತ ಚಾಮುಂಡಿಬೆಟ್ಟದಲ್ಲಿ ಸಡಗರ ಮನೆಮಾಡಿದ್ದು, ಚಾಮುಂಡೇಶ್ವರಿ ದರ್ಶನಕ್ಕೆ ಸಹಸ್ರಾರು ಭಕ್ತರು ಆಗಮಿಸುತ್ತಿದ್ದಾರೆ. ವರ್ಧಂತಿ ಮಹೋತ್ಸವದ ಪ್ರಯುಕ್ರ ದೇವಾಲಯದ ಗರ್ಭಗುಡಿಯನ್ನು ವಿವಿಧ ಬಗೆಯ ಹೂವುಗಳಿಂದ ಅಲಂಕಾರ ಮಾಡಲಾಗಿದೆ.

ವರ್ಧಂತಿ ಮಹೋತ್ಸವದ ಪ್ರಯುಕ್ತ ರಾಜಮಾತೆ ಪ್ರಮೋದಾದೇವಿ ಒಡೆಯರ್‌ ಹಾಗೂ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಪಲ್ಲಕ್ಕಿ ಉತ್ಸವಕ್ಕೆ ಚಾಲನೆ ನೀಡಿದರು. ಈ ವೇಳೆ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಕೂಡ ಉಪಸ್ಥಿತರಿದ್ದರು.

ಬಳಿಕ ಅರ್ಚಕ ಶಶಿಶೇಖರ್‌ ದೀಕ್ಷಿತ್‌ ನೇತೃತ್ವದಲ್ಲಿ ಪಲ್ಲಕ್ಕಿ ಮೇಲೆ ಚಾಮುಂಡೇಶ್ವರಿ ದೇವಿಯ ಮೂರ್ತಿಯನ್ನು ಕೂರಿಸಿ ದೇವಾಲಯದ ಸುತ್ತ ಮೆರವಣಿಗೆ ಮಾಡಲಾಯಿತು. ದೇಗುಲದ ಆವರಣದಲ್ಲೇ ಸಾವಿರಾರು ಸಾರ್ವಜನಿಕರು ಪಲ್ಲಕ್ಕಿ ಮೆರವಣಿಗೆ ನೋಡಿ, ತಾಯಿ ಚಾಮುಂಡಿಯನ್ನು ಮನದಲ್ಲೇ ನೆನೆದರು.

ಇನ್ನು ಇಂದು ರಾತ್ರಿ 8 ಗಂಟೆ ಬಳಿಕ ದರ್ಬಾರ್‌ ಉತ್ಸವ ನಡೆಯಲಿದ್ದು, ಅರಮನೆಯ ದರ್ಬಾರ್‌ ಮಾದರಿಯಲ್ಲೇ ಚಾಮುಂಡೇಶ್ವರಿ ಅಮ್ಮನವರಿಗೆ ದರ್ಬಾರ್‌ ಉತ್ಸವ ನೆರವೇರಲಿದೆ.

 

Tags: