Mysore
29
overcast clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

ಶ್ರೀರಂಗಪಟ್ಟಣ: ಪ್ರವಾಹ ಪೀಡಿತ ಪ್ರದೇಶಕ್ಕೆ ಸಚಿವ ಕೃಷ್ಣ ಭೈರೇಗೌಡ ಭೇಟಿ, ಪರಿಶೀಲನೆ

ಮಂಡ್ಯ: ತಾಲೂಕಿನ ಶ್ರೀರಂಗಪಟ್ಟಣದ ಪ್ರವಾಹ ಪೀಡಿತ ವೆಲ್ಲಿಸ್ಲಿ ಸೇತುವೆ ಮುಳುಗಡೆ ಪ್ರದೇಶಕ್ಕೆ ಶನಿವಾರ(ಜು.27) ಕಂದಾಯ ಸಚಿವ ಕೃಷ್ಣ ಭೈರೇಗೌಡ ಭೇಟಿ ನೀಡಿ ಪರೀಶಿಲನೆ ನಡೆಸಿದರು.

ಶಾಸಕ ರಮೇಶ್‌ ಬಂಡಿಸಿದ್ದೇಗೌಡ, ಜಿಲ್ಲಾಧಿಕಾರಿ ಡಾ.ಕುಮಾರ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಸೇರಿದಂತೆ ಇತರೆ ಅಧಿಕಾರಿಗಳೊಂದಿಗೆ ಪ್ರವಾಹ ಪರಿಸ್ಥಿತಿ ಪರಿಶೀಲಿಸಿದ ಸಚಿವರು, ಕಳೆದ ಬಾರಿಯ ನೆರೆಯ ಪ್ರವಾಹಕ್ಕೆ ಹೋಲಿಸಿದರೆ ಈ ಬಾರಿಯ ಅನಾಹುತ ಕಡಿಮೆ ಇದೆ. ಸಂಬಂಧಪಟ್ಟ ಅಧಿಕಾರಿಗಳು ಇದುವರೆಗಿನ ಬೆಳೆ ನಷ್ಟದ ಬಗ್ಗೆ ಸೂಕ್ತ ವರದಿ ನೀಡಲಿದ್ದಾರೆ. ಸೂಕ್ತ ರೀತಿಯಲ್ಲಿ ಪರಿಹಾರ ನೀಡಲಾಗುವುದು ಎಂದು ತಿಳಿಸಿದರು.

ಕೆಲವು ರೈತರು ನದಿಯ ಜಾಗವನ್ನು ಒತ್ತುವರಿ ಮಾಡಿಕೊಂಡು ಕೃಷಿ ಚಟುವಟಿಕೆ ಮಾಡುತ್ತಿದ್ದಾರೆ. ಆ ಜಮೀನಿಗು ಪರಿಹಾರ ನೀಡಬೇಕು ಎಂದರೆ ಹೇಗೆ ಸಾಧ್ಯ ಎಂದು ಪ್ರಶ್ನಿಸಿದ ಸಚಿವರು, ನದಿಯ ಬದಿಗಳಲ್ಲಿ ಹಾಗೂ ಜಲಾಶಯದ ಹಿನ್ನೀರು ಬದಿಯಲ್ಲಿ ನೆರೆ ಇಲ್ಲದ ಸಂದರ್ಭದಲ್ಲಿ ರೈತರು ಬೆಳೆಯನ್ನು ಬೆಳೆಯುವುದು ಹಾಗೂ ನೆರೆ ಬಂದ ಸಂದರ್ಭದಲ್ಲಿ ಹಿಂದಕ್ಕೆ ಸರಿಯುವುದು ವಾಡಿಕೆಯಾಗಿದೆ. ಇದು ಕಾನೂನಾತ್ಮಕವಾಗಿ ತಪ್ಪು ನೆರೆ ಬಂದ ಸಂದರ್ಭದಲ್ಲಿ ಪ್ರಾಣ ಹಾನಿಯಾಗಬಹುದು ಹಾಗೂ ಇಲ್ಲಿ ಬೆಳೆಯುವ ಬೆಳೆಗಳಿಗೆ ಬೆಳೆ ಹಾನಿ ಪರಿಹಾರ ಒದಗಿಸುವುದು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

Tags: