Mysore
19
few clouds

Social Media

ಸೋಮವಾರ, 04 ನವೆಂಬರ್ 2024
Light
Dark

ನಾಳೆ ಕೆಆರ್‌ಎಸ್‌ಗೆ ಬಾಗಿನ ಅರ್ಪಿಸಲಿರುವ ಸಿಎಂ ಸಿದ್ದರಾಮಯ್ಯ: ಇದು ಕಾರ್ಯಕ್ರಮದ ಲೈವ್‌ ಲಿಂಕ್‌

ಮಂಡ್ಯ: ನಾಳೆ ಸಿಎಂ ಸಿದ್ದರಾಮಯ್ಯ ಅವರು ರೈತರ ಜೀವನಾಡಿ ಕೆಆರ್‌ಎಸ್‌ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದು, ಕಾರ್ಯಕ್ರಮದ ಲೈವ್‌ ಲಿಂಕನ್ನು ಬಿಡುಗಡೆ ಮಾಡಲಾಗಿದೆ.

ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ ಆಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ನಾಳೆ ಕೆಆರ್‌ಎಸ್‌ಗೆ ಬಾಗಿನ ಅರ್ಪಿಸಲಿದ್ದು, ಮಂಡ್ಯ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.

ಇನ್ನು ನಾಳಿನ ಕಾರ್ಯಕ್ರಮದಲ್ಲಿ ಸಿಎಂ ಜೊತೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌, ಕೃಷಿ ಸಚಿವ ಚಲುವರಾಯಸ್ವಾಮಿ ಸೇರಿದಂತೆ ಮಂಡ್ಯ ಜಿಲ್ಲೆಯ ಎಲ್ಲಾ ಶಾಸಕರು ಹಾಗೂ ಅಧಿಕಾರಿಗಳು ಭಾಗಿಯಾಗಲಿದ್ದಾರೆ.

ನಾಳೆ ನಡೆಯುವ ಬಾಗಿನ ಅರ್ಪಣೆ ಕಾರ್ಯಕ್ರಮವನ್ನು ನೇರವಾಗಿ ವೀಕ್ಷಿಸಲು ಲೈವ್‌ ಲಿಂಕ್‌ ಬಿಡುಗಡೆ ಮಾಡಲಾಗಿದೆ. ಈ ಲಿಂಕನ್ನು ಕ್ಲಿಕ್‌ ಮಾಡಿ ನೀವು ಕಾರ್ಯಕ್ರಮವನ್ನು ವೀಕ್ಷಿಸಬಹುದಾಗಿದೆ.

https://app.simplenote.com/p/lgWgFc

Tags: