Mysore
27
few clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಆಗಸ್ಟ್.‌3ರಿಂದ ಬಿಜೆಪಿ-ಜೆಡಿಎಸ್‌ ಪಾದಯಾತ್ರೆ

ಬೆಂಗಳೂರು: ರಾಜ್ಯದಲ್ಲಿ ಮುಡಾ ಹಗರಣ ಭಾರೀ ಸದ್ದು ಮಾಡುತ್ತಿದ್ದು, ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ-ಜೆಡಿಎಸ್‌ ಮೈತ್ರಿಕೂಡ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಸಲು ತೀರ್ಮಾನಿಸಿದೆ.

ರಾಜ್ಯದಲ್ಲಿ ಮುಡಾ ಹಗರಣ ಎಲ್ಲೆಡೆ ಸದ್ದು ಮಾಡುತ್ತಿದ್ದು, ಬಿಜೆಪಿ-ಜೆಡಿಎಸ್‌ ನಾಯಕರು ರಾಜ್ಯ ಸರ್ಕಾರ ಹಾಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸುತ್ತಿದ್ದಾರೆ.

ಮೈಸೂರು ಪಾದಯಾತ್ರೆ ರೂಪುರೇಷೆ ಸಂಬಂಧ ಇಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಮೈತ್ರಿ ನಾಯಕರು, ಮುಂದಿನ ಶನಿವಾರದಂದು ಬೆಂಗಳೂರಿನ ನೈಸ್‌ ರಸ್ತೆಯಿಂದ ಪಾದಯಾತ್ರೆ ಆರಂಭವಾಗಲಿದೆ. ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪಾದಯಾತ್ರೆಗೆ ಚಾಲನೆ ನೀಡಲಿದ್ದಾರೆ.

ಪಾದಯಾತ್ರೆ ಮಾರ್ಗ ಮಧ್ಯೆ ಕೆಲವು ಕಡೆ ಜನರನ್ನು ಸೇರಿಸಿ ಮೈತ್ರಿ ಪಕ್ಷಗಳು ಸಮಾವೇಶ ನಡೆಸಲಿವೆ. ಶನಿವಾರದಿಂದ ಒಂದು ವಾರಗಳ ಕಾಲ ಪಾದಯಾತ್ರೆ ನಡೆಯಲಿದ್ದು, ದಿನಕ್ಕೆ 20 ಕಿ.ಮೀ ಪಾದಯಾತ್ರೆ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.

ಪಾದಯಾತ್ರೆಯಲ್ಲಿ ಬಿಜೆಪಿ-ಜೆಡಿಎಸ್‌ನ ಎಲ್ಲಾ ಶಾಸಕರು ಕೂಡ ಭಾಗಿಯಾಗಲಿದ್ದು, ರಾಜ್ಯ ಸರ್ಕಾರಕ್ಕೆ ಚುರುಕು ಮುಟ್ಟಿಸುತ್ತೇವೆ. ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೂ ನಮ್ಮ ಹೋರಾಟ ನಿಲ್ಲಲ್ಲ ಎಂದು ಕಿಡಿಕಾರಿದರು.

 

 

 

 

 

 

Tags: