Mysore
13
clear sky

Social Media

ಸೋಮವಾರ, 15 ಡಿಸೆಂಬರ್ 2025
Light
Dark

ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿಯಿಲ್ಲ: ಸಿಎಂ ಸಿದ್ದು ಪರ ಜಮೀರ್‌ ಅಹಮ್ಮದ್‌ ಖಾನ್ ಬ್ಯಾಟಿಂಗ್‌

ಬೆಂಗಳೂರು: ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ ಎಂದು ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ಸಿಎಂ ಸಿದ್ದರಾಮಯ್ಯ ಪರ ಬ್ಯಾಟ್‌ ಬೀಸಿದ್ದಾರೆ.

ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಗುಸು ಗುಸು ಎನ್ನುತ್ತಿರುವ ವಿಚಾರ ಹಾಗೂ ಮೈಸೂರು ಮುಡಾ ಹಗರಣ ಕುರಿತಂತೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ಅವರು, ಸಿಎಂ ಕುರ್ಚಿ ಖಾಲಿ ಇದ್ದರೆ ತಾನೇ ಸಿಎಂ ಹುದ್ದೆ ಬಗ್ಗೆ ಚರ್ಚೆ ಮಾಡಬೇಕಿರೋದು ಎಂದು ಖಾರವಾಗಿ ನುಡಿದಿದ್ದಾರೆ.

ಮುಂದುವರಿದು ಮಾತನಾಡಿದ ಅವರು,  ಯಾವ ಕಾರಣಕ್ಕೆ ಸರ್ಕಾರ ಬೀಳುತ್ತೆ ಅಂತಾ ನೀವೇ ಹೇಳಿ ಎಂದು ಮಾಧ್ಯಮದವರನ್ನೇ ಪ್ರಶ್ನಿಸಿದರು. ಮುಡಾ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯರ ಯಾವುದೇ ಪಾತ್ರ ಇಲ್ಲ. ಬಿಜೆಪಿ ಸರ್ಕಾರದ ಅವಧಿಯಲ್ಲೇ ಬದಲಿ ಸೈಟ್‌ ಕೊಡಲಾಗಿದೆ. ಈಗಲೂ ಸಿಎಂ ಸಿದ್ದರಾಮಯ್ಯರಿಗೆ ಯಾವುದೇ ಕಪ್ಪು ಚುಕ್ಕೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಪರ ಬ್ಯಾಟ್‌ ಬೀಸಿದರು.

ಇನ್ನೂ ಬಿಜೆಪಿಯವರಿಗೆ ಮಾಡಲು ಏನೂ ಕೆಲಸ ಇಲ್ಲ. ಅದಕ್ಕಾಗಿಯೇ ಏನಾದರೂ ವಿಷಯ ಇಟ್ಟುಕೊಂಡು ಅದನ್ನೇ ದೊಡ್ಡ ಸುದ್ದಿ ಮಾಡುತ್ತಿದ್ದಾರೆ. ಕುಮಾರಸ್ವಾಮಿಗೆ ಸಿದ್ದರಾಮಯ್ಯರನ್ನು ಕಂಡರೆ ಆಗಲ್ಲ. ಅದಕ್ಕಾಗಿಯೇ ಸಿದ್ದರಾಮಯ್ಯರನ್ನು ಟಾರ್ಗೆಟ್‌ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

Tags:
error: Content is protected !!