Mysore
21
overcast clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ಬ್ಯಾಗ್‌ ರಹಿತ 10 ದಿನಗಳು: ಕೇಂದ್ರದಿಂದ ಮಾರ್ಗಸೂಚಿ ಬಿಡುಗಡೆ

ನವದೆಹಲಿ: ದೇಶದ 6ರಿಂದ 8ನೇ ತರಗತಿವರೆಗಿನ ಮಕ್ಕಳಿಗೆ ಪ್ರತಿ ಶೈಕ್ಷಣಿಕ ವರ್ಷದಲ್ಲಿ 10 ದಿನಗಳವರೆಗೆ ಬ್ಯಾಗ್‌ ರಹಿತ ದಿನಗಳನ್ನು ಜಾರಿಗೊಳಿಸುವ ಸಂಬಂಧ ಕೇಂದ್ರ ಶಿಕ್ಷಣ ಸಚಿವಾಲಯ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಮಕ್ಕಳಲ್ಲಿ ಉತ್ಸಾಹ, ಉಲ್ಲಾಸ ಹೆಚ್ಚಿಸುವುದು. ಒತ್ತಡ ಕಡಿಮೆ ಮಾಡುವುದು, ಪ್ರಾಯೋಗಿಕ ಚಟುವಟಿಕೆಗಳಲ್ಲಿ ಭಾಗಿಯಾಗುವಂತೆ ಮಾಡುವ ಉದ್ದೇಶವನ್ನು ಇದು ಹೊಂದಿದೆ.

6ರಿಂದ 8ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ 10 ದಿನಗಳ ಬ್ಯಾಗ್‌ ರಹಿತ ದಿನಗಳನ್ನು ಪರಿಚಯಿಸಬೇಕು ಎಂದು ಎನ್‌ಇಪಿ 2020 ಶಿಫಾರಸು ಮಾಡಿತ್ತು. ಅದಕ್ಕೆ ಪೂರಕವಾಗಿ ಕೇಂದ್ರ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ತಿನ ಅಂಗಸಂಸ್ಥೆಯಾದ ಪಂಡಿತ್‌ ಸುಂದರ್‌ಲಾಲ್‌ ಶರ್ಮಾ ಸೆಂಟ್ರಲ್‌ ಇನ್‌ಸ್ಟಿಟ್ಯೂಟ್‌ ಫಾರ್‌ ವೋಕೇಷನಲ್‌ ಎಜುಕೇಷನ್‌ ಈ ಕುರಿತು ಮಾರ್ಗಸೂಚಿಯನ್ನು ಅಭಿವೃದ್ಧಿಪಡಿಸಿದೆ. ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ ನಾಲ್ಕನೇ ವರ್ಷಾಚರಣೆ ಸಂದರ್ಭಗಳಲ್ಲಿ ಅದನ್ನು ಬಿಡುಗಡೆ ಮಾಡಲಾಗಿದೆ.

Tags: