Mysore
24
overcast clouds

Social Media

ಶನಿವಾರ, 23 ಮೇ 2026
Light
Dark

ಕಾವೇರಿ ನದಿಯಲ್ಲಿ ಮುಂದುವರಿದ ಪ್ರವಾಹ ಪರಿಸ್ಥಿತಿ: ಅನೇಕ ಕೃಷಿ ಭೂಮಿ ಜಲಾವೃತ

ಶ್ರೀರಂಗಪಟ್ಟಣ: ಕಾವೇರಿ ನದಿಯಲ್ಲಿ ಪ್ರವಾಹ ಮುಂದುವರಿದಿದ್ದು, ನದಿ ತೀರದ ಅನೇಕ ಕೃಷಿ ಭೂಮಿಗಳು ಜಲಾವೃತಗೊಂಡಿವೆ.

ಕಾವೇರಿ ನದಿಯಲ್ಲಿ ಪ್ರವಾಹ ಮುಂದುವರಿದಿರುವ ಹಿನ್ನೆಲೆಯಲ್ಲಿ ಕೃಷಿಯನ್ನೇ ನಂಬಿ ಜೀವನ ಸಾಗಿಸುತ್ತಿದ್ದ ರೈತರು ಈಗ ಕಂಗಾಲಾಗಿದ್ದಾರೆ. ಪ್ರವಾಹದ ನೀರು ಕೃಷಿ ಭೂಮಿಗಳಲ್ಲಿ ನಿಂತಿದ್ದು, ಬೆಳೆಗಳು ಕೊಳೆತು ಹೋಗುತ್ತಿವೆ.

ಕೃಷಿ ಭೂಮಿಯಲ್ಲಿ ಬೆಳೆದಿದ್ದ ಕನಕಾಂಬರ ಹೂವು ಸಂಪೂರ್ಣ ನಾಶವಾಗಿದ್ದು, ಅನ್ನದಾತರು ತೀವ್ರ ಕಂಗಾಲಾಗಿದ್ದಾರೆ.

ಕೆಆರ್‌ಎಸ್‌ ಜಲಾಶಯದಿಂದ 1.50 ಲಕ್ಷ ಕ್ಯೂಸೆಕ್ಸ್‌ ನೀರನ್ನು ನದಿಗೆ ಹರಿಸಿದರೆ ನದಿ ತೀರದಲ್ಲಿರುವ 220 ಹೆಕ್ಟೇರ್‌ ಕೃಷಿ ಭೂಮಿ ಜಲಾವೃತವಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಪ್ರಸ್ತುತ ಈಗ ಜಲಾಶಯದಿಂದ ಒಂದು ಲಕ್ಷದ 10 ಸಾವಿರ ಕ್ಯೂಸೆಕ್ಸ್‌ ನೀರನ್ನು ಹೊರಬಿಡಲಾಗುತ್ತಿದೆ.

ಈಗ ಬೆಳೆ ನಾಶದಿಂದ ರೈತರು ತೀವ್ರ ಕಂಗಾಲಾಗಿದ್ದು, ಸೂಕ್ತ ಪರಿಹಾರ ನೀಡುವ ಭರವಸೆ ನೀಡಿದ್ದಾರೆ.

 

Tags:
error: Content is protected !!