Mysore
22
overcast clouds

Social Media

ಶುಕ್ರವಾರ, 12 ಜೂನ್ 2026
Light
Dark

ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ಡಿಕೆ ಶಿವಕುಮಾರ್‌: ಮೇಕೆದಾಟು ಬಗ್ಗೆ ಚರ್ಚೆ?

ನವದೆಹಲಿ: ಬುಧವಾರ (ಜು.೩೧) ನವದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ಭೇಟಿಯಾಗಿದ್ದಾರೆ. ಭೇಟಿ ವೇಳೆ ಮೇಕೆದಾಟು ಯೋಜನೆ ಬಗ್ಗೆ ಚರ್ಚಿಸಿರುವುದಾಗಿ ಡಿಕೆ ಶಿವಕುಮಾರ್‌ ಹೇಳಿದ್ದಾರೆ.

ಕರ್ನಾಟಕ ಹಾಗೂ ತಮಿಳುನಾಡು ರಾಜ್ಯಗಳೇ ಒಟ್ಟಾಗಿ ಚರ್ಚಿಸುವ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳುವಂತೆ ಪ್ರಧಾನಿ ಮೋದಿ ಸಲಹೆ ನೀಡಿರುವುದಾಗಿ ಡಿಕೆ ಹೇಳಿದ್ದಾರೆ.

ಪ್ರಧಾನಿ ಜತೆಗಿನ ಸಭೆ ಬಳಿಕ ಮಾತನಾಡಿದ ಡಿಕೆಶಿ, ಮೇಕೆದಾಟು ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಮಧ್ಯಸ್ಥಿಕೆ ವಹಿಸಿ ಮಾತನಾಡುವಂತೆ ಮನವಿ ಕೋರಿದ್ದಾಗಿ ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಪಿಎಂ ಮೋದಿ ಅವರು, ನಿಮ್ಮಲ್ಲಿಯೇ ಬಗೆಹರಿಸಿಕೊಳ್ಳುವಂತೆ ಸೂಚನೆ ನೀಡಿರುವುದಾಗಿ ಹೇಳಿದ್ದಾರೆ ಎಂದು ಡಿಕೆ ಸ್ಪಷ್ಟಪಡಿಸಿದರು.

ಇನ್ನು ಮೇಕೆದಾಟು ಜಲಾಶಯ ನಿರ್ಮಾಣ ಕುರಿತಂತೆ, ಜುಲೈನಲ್ಲಿ ಹೆಚ್ಚುವರಿ ನೀರನ್ನು ತಮಿಳುನಾಡಿಗೆ ಬಿಟ್ಟಿರುವ ಬಗ್ಗೆ, ಮಹಾದಾಯಿ, ಭದ್ರ ಮೇಲ್ದಂಡೆ ಯೋಜನೆಗಳ ವಿಷಯಗಳಿಗೆ ಸಂಬಂಧಿಸಿದಂತೆ ಚರ್ಚಿಸಲಾಗಿದೆ ಎಂಬ ಬಗ್ಗೆ ವಿವರಿಸಿದರು.

Tags:
error: Content is protected !!