Mysore
24
light rain

Social Media

ಮಂಗಳವಾರ, 29 ಸೆಪ್ಟೆಂಬರ್ 2026
Light
Dark

ನಾಳೆ ಕೊಡಗಿಗೆ ಸಿಎಂ ಸಿದ್ದರಾಮಯ್ಯ ಭೇಟಿ: ಮಳೆಹಾನಿ ಪ್ರದೇಶಗಳ ಪರಿಶೀಲನೆ

ಕೊಡಗು: ವರುಣಾರ್ಭಟಕ್ಕೆ ತತ್ತರಿಸಿರುವ ಕೊಡಗು ಜಿಲ್ಲೆಗೆ ಇದೇ ಶುಕ್ರವಾರ (ಆ.2) ಕೊಡಗು ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ, ಮಳೆಹಾನಿ ಪ್ರದೇಶಗಳ ಪರಿಶೀಲನೆ ನಡೆಸಲಿದ್ದಾರೆ.

ವಿರಾಜಪೇಟೆ ಮತ್ತು ಮಡಿಕೇರಿ ಕ್ಷೇತ್ರದಲ್ಲಿ ಮಳೆಹಾನಿ ಪ್ರದೇಶಗಳ ಪರಿಶೀಲನೆ ನಡೆಸಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕುಟ್ಟ-ಮಂಚಳ್ಳಿ ರಸ್ತೆಯಲ್ಲಿ ಬರೆಕುಸಿತಗೊಂಡ ಸ್ಥಳ ಪರಿಶೀಲನೆ ನಡೆಸಲಿದ್ದಾರೆ.

ಬಳಿಕ ಶ್ರೀಮಂಗಲದ ಕಾಯಿಮಾನಿಯಲ್ಲಿ ಮಳೆಹಾನಿ ಪರಿಶೀಲನೆ ನಡೆಸಿ ವರದಿ ಪಡೆಯಲಿದ್ದಾರೆ.

ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಹಾಗೂ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್‌ಗೌಡ ಮನವಿ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೊಡಗಿಗೆ ಆಗಮಿಸುತ್ತಿದ್ದು, ಜಿಲ್ಲೆಯ ಎರಡು ಕ್ಷೇತ್ರಗಳ ಮಳೆಹಾನಿ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.

Tags:
error: Content is protected !!