Mysore
25
overcast clouds

Social Media

ಮಂಗಳವಾರ, 16 ಡಿಸೆಂಬರ್ 2025
Light
Dark

ಕೊಡಗಿನಲ್ಲಿ ಧಾರಾಕಾರ ಮಳೆ: ನಾಳೆ ಸಿಎಂ ಸಿದ್ದರಾಮಯ್ಯ ಭೇಟಿ

ಕೊಡಗು: ಕೊಡಗಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ನಾಳೆ ಮಳೆ ಹಾನಿ ಪ್ರದೇಶಗಳಿಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ, ಪರಿಶೀಲನೆ ನಡೆಸಲಿದ್ದಾರೆ.

ಕೊಡಗಿನಲ್ಲಿ ಕಳೆದ ಕೆಲ ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆಗೆ ಹಲವೆಡೆ ರಸ್ತೆ ಸಂಪರ್ಕ ಕಡಿತವಾಗಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ.

ಇನ್ನೂ ಭಾರೀ ಮಳೆಯಿಂದ ಕೊಡಗಿನಲ್ಲಿ ಸಾವಿರಾರು ವಿದ್ಯುತ್‌ ಕಂಬಗಳು ಧರೆಗುರುಳಿದ್ದು, ಜನತೆ ಕತ್ತಲಿನಲ್ಲಿಯೇ ಕಾಲ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೊಡಗಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಹಲವೆಡೆ ಜಮೀನುಗಳು ಕೂಡ ಹಾಳಾಗಿದ್ದು, ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ಮಳೆ ನಿರಂತರವಾಗಿ ಸುರಿಯುತ್ತಿರುವ ಹಿನ್ನೆಲೆಯಲ್ಲಿ ನಾಳೆ ಸಿಎಂ ಸಿದ್ದರಾಮಯ್ಯ ಮಳೆ ಹಾನಿ ಪ್ರದೇಶಗಳನ್ನು ವೀಕ್ಷಣೆ ಮಾಡಲಿದ್ದಾರೆ.

ನಾಳೆ ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನಿಂದ ಮೈಸೂರಿಗೆ ವಿಶೇಷ ವಿಮಾನದಲ್ಲಿ ಬಂದು ಅಲ್ಲಿಂದ ರಸ್ತೆ ಮಾರ್ಗದಲ್ಲಿ ಕೊಡಗು ತಲುಪಿ ಮಳೆ ಹಾನಿ ಪ್ರದೇಶಗಳನ್ನು ವೀಕ್ಷಣೆ ಮಾಡಲಿದ್ದಾರೆ.

ಕಾಳಜಿ ಕೇಂದ್ರಕ್ಕೂ ಭೇಟಿ ನೀಡಲಿರುವ ಸಿಎಂ ಸಿದ್ದರಾಮಯ್ಯ ಅವರು, ಅಧಿಕಾರಿಗಳ ಜೊತೆ ಮಳೆ ಹಾನಿ ಬಗ್ಗೆ ಮಾಹಿತಿ ಪಡೆದುಕೊಳ್ಳಲಿದ್ದಾರೆ.

Tags:
error: Content is protected !!