Mysore
25
few clouds

Social Media

ಭಾನುವಾರ, 04 ಜನವರಿ 2026
Light
Dark

ಕೊಡ್ಲಿಪೇಟೆ : ಬಸ್‌-ಕಾರು ಡಿಕ್ಕಿ; ನಾಲ್ವರಿಗೆ ಗಾಯ

ಕೊಡ್ಲಿಪೇಟೆ/ಮಡಿಕೇರಿ: ಶನಿವಾರಸಂತೆ ಸಮೀಪದ ಕೊಡ್ಲಿಪೇಟೆ-ಸಕಲೇಶಪುರ ರಾಜ್ಯ ಹೆದ್ದಾರಿಯ ಶಾಂತಪುರ ಸೇತುವೆ ಬಳಿ ಇಂದು(ಆ.3) ಬೆಳ್ಳಗೆ 8 ಗಂಟೆಗೆ ಕೆಎಸ್‌ಆರ್‌ಟಿಸಿ ಬಸ್‌ ಮತ್ತು ಕಾರು ನಡುವೆ ಡಿಕ್ಕಿ ಸಂಭವಿಸಿ ನಾಲ್ವರು ಗಾಯಗೊಂಡಿದ್ದಾರೆ.

ಸಕಲೇಶಪುರದ ಕಾಗನೂರು ಗ್ರಾಮದ ಅಪ್ಪನಿ ಗೌಡ ಎಂಬುವವರ ಕಾರು ಚಿಕ್ಕಮಗಳೂರಿನ ಕಡೆಯಿಂದ ಕೊಡ್ಲಿಪೇಟೆ ಮಾರ್ಗವಾಗಿ ಮಡಿಕೇರಿಗೆ ಬರುವಾಗ ಕೆಎಸ್‌ಆರ್‌ಟಿಸಿ ಬಸ್‌ಗೆ ಡಿಕ್ಕಿಯಾಗಿದೆ. ಗಾಯಳುಗಳ ಸ್ಥಿತಿ ಚಿಂತಾಜನಕವಾಗಿದ್ದು, ಕೊಡ್ಲಿಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಾಯಾಳುಗಳಿಗೆ ಕೊಡ್ಲಿಪೇಟೆ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಸರಿಯಾದ ಸಮಯಕ್ಕೆ ದೊರಕದಿರುವ ಕಾರಣ ಹೆಚ್ಚಿನ ಚಿಕಿತ್ಸೆಗೆ ಹಾಸನದ ಆಸ್ಪತ್ರೆಗೆ ರವಾನಿಸಲು ಆಂಬ್ಯುಲೆನ್ಸ್ ಬರದಿರುವ ಕಾರಣ ಕುಟುಂಬ ಹಾಗೂ ಸ್ಥಳೀಯರು ಅಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊಡ್ಲಿಪೇಟೆ ಠಾಣಾ ಪೊಲೀಸರು ಸ್ಥಳಕ್ಕೆ ಧಾವಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Tags:
error: Content is protected !!