Mysore
25
few clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

ಕೆಆರ್‌ಎಸ್‌ ಜಲಾಶಯದ ಹೊರಹರಿವಿನಲ್ಲೂ ಭಾರೀ ಇಳಿಕೆ: ನಿರಾಳರಾದ ನದಿ ಪಾತ್ರದ ತಗ್ಗು ಪ್ರದೇಶದ ಜನತೆ

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾದ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ಜಲಾಶಯದ ಒಳಹರಿವಿನಲ್ಲೂ ಭಾರೀ ಇಳಿಕೆ ಕಂಡುಬಂದಿದೆ.

ಮಳೆ ಕಡಿಮೆಯಾಗಿ ಒಳಹರಿವು ಕಡಿಮೆಯಾದ ಪರಿಣಾಮ ಕೆಆರ್‌ಎಸ್‌ಜಲಾಶಯದಿಂದ ಹೊರಹರಿವನ್ನು ಕೂಡ ಕಡಿಮೆ ಮಾಡಲಾಗಿದೆ. ಜಲಾಶಯದ ಇಂದಿನ ಒಳಹರಿವು 50,000 ಕ್ಯೂಸೆಕ್ಸ್‌ಗಳಾಗಿದ್ದು, ಹೊರಹರಿವನ್ನು ಕೂಡ 40,000 ಕ್ಯೂಸೆಕ್ಸ್‌ಗೆ ಇಳಿಕೆ ಮಾಡಲಾಗಿದೆ. ಜಲಾಶಯದ ಇಂದಿನ ನೀರಿನ ಮಟ್ಟ 124 ಅಡಿಗಳಾಗಿದ್ದು, ಜಲಾಶಯದ ಗರಿಷ್ಠ ನೀರಿನ ಮಟ್ಟ 124.80 ಅಡಿಗಳಾಗಿದೆ.

ಜಲಾಶಯದಿಂದ ಹೊರಹರಿವು ಕಡಿಮೆಯಾಗುತ್ತಿದ್ದಂತೆ ಕಾವೇರಿ ನದಿ ಪಾತ್ರದ ತಗ್ಗು ಪ್ರದೇಶಗಳಲ್ಲಿ ವಾಸಿಸುತ್ತಿರುವ ಜನತೆ ಕೊಂಚ ನಿರಾಳರಾಗಿದ್ದಾರೆ. ನದಿಯ ಆರ್ಭಟ ನಿಂತರೂ ತಗ್ಗು ಪ್ರದೇಶಗಳಲ್ಲಿ ಕೆಸರು ಮಾತ್ರ ಇನ್ನೂ ಕಡಿಮೆಯಾಗಿಲ್ಲ. ಇನ್ನೆರಡು ದಿನಗಳಲ್ಲಿ ತಗ್ಗು ಪ್ರದೇಶದ ಜನರ ಜೀವನ ಯಥಾಸ್ಥಿತಿ ಆಗಲಿದ್ದು, ಜನತೆ ಮನೆಯ ಸ್ವಚ್ಛತೆ ಕಡೆ ಮುಖ ಮಾಡಿದ್ದಾರೆ.

ಇನ್ನು ಕೆಆರ್‌ಎಸ್‌ಜಲಾಶಯದಿಂದ ಹೊರಹರಿವನ್ನು ಕಡಿಮೆ ಮಾಡಿರುವ ಹಿನ್ನೆಲೆಯಲ್ಲಿ ಮಂಡ್ಯದ ಪ್ರಸಿದ್ಧ ಪ್ರವಾಸಿ ತಾಣಗಳು ಕೂಡ ಈಗ ಶಾಂತ ರೂಪ ತಾಳಿವೆ. ಇನ್ನು ಮೂರು ದಿನಗಳಲ್ಲಿ ಕಾವೇರಿ ನದಿಯ ನೀರಿನ ಪ್ರಮಾಣ ಕಡಿಮೆಯಾದರೆ ಎಲ್ಲಾ ಪ್ರವಾಸಿ ತಾಣಗಳಿಗೂ ಕೂಡ ಪ್ರವಾಸಿಗರಿಗೆ ಅವಕಾಶ ಕಲ್ಪಿಸುವ ಸಾಧ್ಯತೆಯಿದೆ.

ಶ್ರೀರಂಗಪಟ್ಟಣ ನಿಮಿಷಾಂಭ ದೇವಸ್ಥಾನದ ಆವರಣ ಕೂಡ ಕೆಸರಿನಿಂದ ಕೂಡಿದ್ದು, ಸ್ಥಳೀಯರು ಕೆಸರು ಸ್ವಚ್ಛ ಕಾರ್ಯದಲ್ಲಿ ತೊಡಗಿದ್ದಾರೆ.

Tags: