Mysore
27
few clouds

Social Media

ಭಾನುವಾರ, 10 ನವೆಂಬರ್ 2024
Light
Dark

ನಾಲ್ಕನೇ ದಿನಕ್ಕೆ ಕಾಲಿಟ್ಟ ಬಿಜೆಪಿ-ಜೆಡಿಎಸ್‌ ಪಾದಯಾತ್ರೆ

ಮಂಡ್ಯ: ಮುಡಾ ಹಗರಣ ಖಂಡಿಸಿ ಬಿಜೆಪಿ-ಜೆಡಿಎಸ್‌ ನಾಯಕರು ಹಮ್ಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.

ಮೈಸೂರು ಮುಡಾ ಹಗರಣ ಹಾಗೂ ವಾಲ್ಮೀಕಿ ನಿಗಮದ ಹಗರಣ ಖಂಡಿಸಿ ಬಿಜೆಪಿ-ಜೆಡಿಎಸ್‌ ನಾಯಕರು ಮೈಸೂರು ಚಲೋ ಪಾದಯಾತ್ರೆ ಹಮ್ಮಿಕೊಂಡಿದ್ದು, ಈ ಪಾದಯಾತ್ರೆ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ.

ನಾಲ್ಕನೇ ದಿನವಾದ ಇಂದು ಸಕ್ಕರೆ ನಾಡು ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ನಿಡಘಟ್ಟದಿಂದ ಪಾದಯಾತ್ರೆಯನ್ನು ಆರಂಭಿಸಲಾಗಿದೆ. ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದು, ಭ್ರಷ್ಟ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್‌ ನಡೆಸುತ್ತಿರುವ ಈ ಚಳುವಳಿಯಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಹೆಜ್ಜೆ ಹಾಕೋಣ, ಭ್ರಷ್ಟ ಸರ್ಕಾರಕ್ಕೆ ಈ ಮೂಲಕ ಚುರುಕು ಮುಟ್ಟಿಸೋಣ ಎಂದು ಕರೆ ಕೊಟ್ಟಿದ್ದಾರೆ.

ಇಂದಿನ ಪಾದಯಾತ್ರೆಯಲ್ಲೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್‌, ನಿಖಿಲ್‌ ಕುಮಾರಸ್ವಾಮಿ ಸೇರಿದಂತೆ ಹಲವು ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು ಭಾಗಿಯಾಗಿದ್ದಾರೆ.

ಇಂದಿನ ಪಾದಯಾತ್ರೆ ಮಾರ್ಗದಲ್ಲಿಯೂ ಕೂಡ ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು ಕಾರ್ಯಕರ್ತರನ್ನು ಉದ್ದೇಶಿಸಿ ಸಭೆ ನಡೆಸಲಿದ್ದು, ರಾಜ್ಯ ಸರ್ಕಾರದ ವಿರುದ್ಧ ಮುಂದಿನ ಹೋರಾಟದ ರೂಪುರೇಷೆಗಳನ್ನು ಕುರಿತು ಚರ್ಚೆ ನಡೆಸಲಿದ್ದಾರೆ.

Tags: