Mysore
19
broken clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ರಾಜ್ಯದಲ್ಲಿ ಆಗಸ್ಟ್.12ರವರೆಗೆ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಕಳೆದ ನಾಲ್ಕು ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ಮಳೆ ಮತ್ತೆ ಮುಂದುವರಿಯಲಿದ್ದು, ರಾಜ್ಯದಲ್ಲಿ ಆಗಸ್ಟ್.‌12ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ, ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗಲಿದೆ.

ಇನ್ನು ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ವೇಳೆಗೆ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇನ್ನು ಕೊಡಗಿನಲ್ಲೂ ಕೂಡ ಅತೀ ಹೆಚ್ಚು ಮಳೆ ಸುರಿಯುವ ಸಾಧ್ಯತೆಯಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

ಈಗಾಗಲೇ ಕೊಡಗಿನ ಜನತೆ ಮಳೆ ಹಾಗೂ ಗಾಳಿಯಿಂದ ಭಾರೀ ಸಂಕಷ್ಟ ಅನುಭವಿಸಿದ್ದಾರೆ. ಈಗ ಮತ್ತೆ ಮಳೆ ಜಾಸ್ತಿಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕೊಡಗು ಜನತೆ ಭಾರೀ ಭಯಭೀತರಾಗಿದ್ದಾರೆ.

ಮಳೆ ಜಾಸ್ತಿಯಾಗಲಿರುವ ಪರಿಣಾಮ ಜಲಾಶಯಗಳಲ್ಲೂ ಕೂಡ ನೀರಿನ ಒಳಹರಿವು ಹೆಚ್ಚಾಗಲಿದೆ. ಆದ್ದರಿಂದ ಹೊರಹರಿವನ್ನು ಕೂಡ ಹೆಚ್ಚಳ ಮಾಡಲಾಗುವುದು ಎಂದು ನೀರಾವರಿ ಇಲಾಖೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

 

Tags: