ಬೆಂಗಳೂರು: ಶ್ರಾವಣ ಮಾಸ ಪ್ರಾರಂಭವಾಗುತ್ತಿದ್ದಂತೆ ಜನತೆಗೆ ಶಾಕ್ ಎದುರಾಗಿದ್ದು, ಹೂವು-ಹಣ್ಣುಗಳ ಬೆಲೆಯಲ್ಲಿ ಏರಿಕೆಯಾಗಿದೆ.
ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆಯಲ್ಲಿ ಏರಿಕೆಯಾಗುತ್ತಲೇ ಇದೆ. ತರಕಾರಿ ಬೆಲೆ ಕೇಳಿದರೆ ಗ್ರಾಹಕರು ಜೇಬು ಮುಟ್ಟಿ ನೋಡಿಕೊಳ್ಳುವ ಹಾಗಾಗಿದೆ.
ಇದೀಗ ಶ್ರಾವಣ ಮಾಸ ಆರಂಭವಾಗಿದ್ದು, ಹೂ ಹಾಗೂ ಹಣ್ಣುಗಳ ಬೆಲೆ ಏರಿಕೆ ಮಾಡಲಾಗಿದೆ. ಹೀಗಾಗಿ ಕಳೆದ ವಾರಕ್ಕೆ ಹೋಲಿಕೆ ಮಾಡಿದರೆ ತರಕಾರಿಗಳ ಬೆಲೆ 10 ರಿಂದ 20 ರೂಪಾಯಿ ಏರಿಕೆಯಾಗಿದೆ.
ಶ್ರಾವಣ ಮಾಸ ಆರಂಭವಾಗುತ್ತಿದ್ದಂತೆ ಹಬ್ಬಗಳು ಬರುತ್ತಿದ್ದು, ತರಕಾರಿ, ಹೂ ಹಣ್ಣುಗಳ ಬೆಲೆ ಗಗನಕ್ಕೇರಿದೆ.
ಮುಂದಿನ ದಿನಗಳಲ್ಲಿ ಬೆಲೆ ಮತ್ತಷ್ಟು ಹೆಚ್ಚಾಗಲಿದ್ದು, ಗ್ರಾಹಕರು ತೀವ್ರ ಕಂಗಾಲಾಗಿದ್ದಾರೆ. ಸದ್ಯ ಮಳೆ ಇರುವ ಕಾರಣ ತರಕಾರಿಗಳು ಹೆಚ್ಚಿನ ಪ್ರಮಾಣದಲ್ಲಿ ಬರುತ್ತಿಲ್ಲ. ಮಳೆ ನಿಂತರಷ್ಟೇ ಬೆಲೆಗಳು ಕೂಡ ಕಡಿಮೆಯಾಗುತ್ತದೆ. ಅಲ್ಲಿಯವರೆಗೂ ಬೆಲೆ ಇಳಿಕೆ ಸಾಧ್ಯತೆ ಕಡಿಮೆ ಎಂದು ವ್ಯಾಪಾರಸ್ಥರು ಹೇಳಿದ್ದಾರೆ.
ಗ್ರಾಹಕರು ಕೊಳ್ಳಲೇಬೇಕಾದ ಅನಿವಾರ್ಯತೆ ಇರುವುದರಿಂದ ಹಣ್ಣು, ತರಕಾರಿ ಹಾಗೂ ಹೂವುಗಳನ್ನು ಜಾಸ್ತಿ ಖರೀದಿಸುವ ಬದಲು ಸ್ವಲ್ಪ ಸ್ವಲ್ಪ ಖರೀದಿ ಮಾಡುತ್ತಿದ್ದಾರೆ.