Mysore
22
clear sky

Social Media

ಭಾನುವಾರ, 22 ಡಿಸೆಂಬರ್ 2024
Light
Dark

ಬಾಂಗ್ಲಾ ಸರ್ಕಾರದ ಮುಖ್ಯಸ್ಥರಾಗಿ ಮೊಹಮ್ಮದ್‌ ಯೂನುಸ್‌ ಆಯ್ಕೆ

ಢಾಕಾ: ನೊಬೆಲ್‌ ಶಾಂತಿ ಪುರಸ್ಕೃತ ಹಾಗೂ ಗ್ರಾಮೀಣ ಬ್ಯಾಂಕ್‌ ಸ್ಥಾಪಿಸಿದ್ದ ಮೊಹಮ್ಮದ್‌ ಯೂನುಸ್‌ರನ್ನು ಬಾಂಗ್ಲಾದೇಶ ಸರ್ಕಾರದ ಮುಖ್ಯಸ್ಥರನ್ನಾಗಿ ಆಯ್ಕೆ ಮಾಡಲಾಗಿದೆ.

ಬಾಂಗ್ಲಾದೇಶದಲ್ಲಿ ಕ್ಷಿಪ್ರ ಬೆಳವಣಿಗೆ ನಡೆಯುತ್ತಿದ್ದು, ಹಿಂದು ದೇವಾಲಯಗಳೇ ಸಂಘಟನೆಗಳ ಟಾರ್ಗೆಟ್‌ ಆಗಿವೆ. ಅಲ್ಲಿ ಹಲವು ಹಿಂದು ದೇವಾಲಯಗಳನ್ನು ಧ್ವಂಸ ಮಾಡಲಾಗಿದೆ.

ಈ ಬೆನ್ನಲ್ಲೇ ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಮೊಹಮ್ಮದ್‌ ಯೂನುಸ್‌ ಅವರನ್ನು ಪ್ರಧಾನಿಯನ್ನಾಗಿ ನೇಮಿಸಬೇಕು ಎಂದು ಆಗ್ರಹಿಸಿದ್ದರು.

ಸಂಸತ್ತನ್ನ ವಿಸರ್ಜಿಸಿದ ಬೆನ್ನಲ್ಲೇ ಬಾಂಗ್ಲಾದೇಶದ ಅಧ್ಯಕ್ಷ ಮೊಹಮ್ಮದ್‌ ಶಹಾಬುದ್ದೀನ್‌ ಅವರು, 13 ಸದಸ್ಯರೊಂದಿಗೆ ಮಧ್ಯಂತರ ಸರ್ಕಾರದ ರಚನೆ ಬಗ್ಗೆ ಚರ್ಚೆ ನಡೆಸಿದ್ದರು. ಈ ವೇಳೆ ಯೂನುಸ್‌ ಅವರಿಗೆ ಅಧಿಕಾರ ನೀಡಬೇಕೆಂದು ವಿದ್ಯಾರ್ಥಿಗಳು ಆಗ್ರಹಿಸಿದ್ದರು.

ಈ ಹಿನ್ನೆಲೆಯಲ್ಲಿ ಮೊಹಮ್ಮದ್‌ ಶಹಾಬುದ್ದೀನ್‌ ಅವರು ಇಂದು ನೊಬೆಲ್‌ ಪ್ರಶಸ್ತಿ ವಿಜೇತ ಮೊಹಮ್ಮದ್‌ ಯೂನುಸ್‌ ಅವರನ್ನು ಮಧ್ಯಂತರ ಸರ್ಕಾರದ ಮುಖ್ಯಸ್ಥರನ್ನಾಗಿ ನೇಮಕ ಮಾಡಿದ್ದಾರೆ.

ಈ ಮೂಲಕ ಯೂನುಸ್‌ ಅವರಿಗೆ ಬಾಂಗ್ಲಾದೇಶದ ಸೇನೆ ಬೆಂಬಲ ನೀಡಿದ್ದರಿಂದ ಸದ್ಯ ತಲೆದೋರಿರುವ ಸಮಸ್ಯೆಗೆ ತಾತ್ಕಾಲಿಕ ಪರಿಹಾರ ಸಿಕ್ಕಿದಂತಾಗಿದೆ.

 

 

Tags: