ತುಮಕೂರು: ದೇಶ ಮತ್ತು ಪ್ರಪಂಚದಲ್ಲಿ ಪರಿಸರ ಅಸಮತೋಲನದ ಗಂಭೀರ ಸಮಸ್ಯೆ ಇದೆ ಎಂದು ರಾಜ್ಯಪಾಲರ ಥಾವರ್‌ಚಂದ್‌ಗೆಹ್ಲೋಟ್‌ಅಸಮಾಧಾನ ಹೊರಹಾಕಿದ್ದಾರೆ.
ಪರಿಸರವನ್ನು ರಕ್ಷಿಸುವ ಮತ್ತು ಸುಧಾರಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಹೀಗಾಗಿ ಎಲ್ಲರೂ ತಾಯಿ ಹೆಸರಲ್ಲಿ ಮರನೆಟ್ಟು ಪರಿಸರ ಸಂರಕ್ಷಣೆಗೆ ಮುಂದಾಗಬೇಕು ಎಂದು ಕರೆ ನೀಡಿದರು.
ತಾಯಿ ಹೇಗೆ ಮಕ್ಕಳನ್ನು ಪೋಷಿಸುತ್ತಾಳೋ ಹಾಗೆ ಸಸಿ ನೆಡುವುದರ ಜೊತೆಗೆ ಅದನ್ನು ಪೋಷಿಸಿ ಸಂರಕ್ಷಿಸಬೇಕು ಎಂದು ಹೇಳಿದರು.
ಪ್ರಸ್ತುತ ತಂತ್ರಜ್ಞಾನವು ಊಹಿಸುವುದಕ್ಕಿಂತ ವೇಗವಾಗಿ ಬದಲಾಗುತ್ತಿದೆ. ಆದ್ದರಿಂದ ನಮ್ಮ ಸಂಶೋಧಕರು, ವಿಜ್ಞಾನಿಗಳು ಮತ್ತು ತಜ್ಞರು ಪ್ರತಿಯೊಂದು ಪ್ರದೇಶವನ್ನು ನಿರೀಕ್ಷಿಸುವುದು ಮತ್ತು ಅದಕ್ಕೆ ಅನುಗುಣವಾಗಿ ಯೋಜಿಸುವುದು ಅವಶ್ಯಕ.
ನಮ್ಮ ದೇಶವು ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುತ್ತಾ ವೇಗದಲ್ಲಿ ಸಾಗುತ್ತಿದೆ. ಮುಂಬರುವ ವರ್ಷಗಳಲ್ಲಿ ದೇಶವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರಗಳ ಮುಂಚೂಣಿಗೆ ತರಲು ನಾವೆಲ್ಲಾ ಶ್ರಮಿಸಬೇಕು ಎಂದು ಕಿವಿಮಾತು ಹೇಳಿದರು.