ಮೈಸೂರು: ನಾಲೆಯಲ್ಲಿ ಹಸು ತೊಳೆಯಲು ಹೋಗಿ ಕಾಲು ಜಾರಿ ಬಿದ್ದು ರೈತ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಸಾಲಿಗ್ರಾಮ ತಾಲ್ಲೂಕಿನ ಕರ್ತಾಳು ಗ್ರಾಮದಲ್ಲಿ ನಡೆದಿದೆ.
ಪುಟ್ಟೇಗೌಡ ಎಂಬುವವರೇ ಕಾಲುವೆಯಲ್ಲಿ ಕಾಲು ಜಾರಿ ಬಿದ್ದು ಸಾವನ್ನಪ್ಪಿರುವ ದುರ್ದೈವಿಯಾಗಿದ್ದಾರೆ. ಜಮೀನಿನಲ್ಲಿ ಕೆಲಸ ಮುಗಿಸಿದ ಬಳಿಕ ಕಟ್ಟೆಪುರ ನಾಲೆಯಲ್ಲಿ ಹಸುಗಳನ್ನು ತೊಳೆಯಲು ಹೋದ ವೇಳೆ ಈ ಘಟನೆ ನಡೆದಿದೆ.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಶವವನ್ನು ಹುಡುಕಿ ಮೇಲಕ್ಕೆ ತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.
ಘಟನಾ ಸ್ಥಳದಲ್ಲಿ ಪತ್ನಿ ಹಾಗೂ ಮಕ್ಕಳ ಆಕ್ರಂದನ ಮುಗಿಲುಮುಟ್ಟಿತ್ತು. ಈ ಸಂಬಂಧ ಸಾಲಿಗ್ರಾಮ ಪೊಲೀಸ್‌ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.