ಓದುಗರ ಪತ್ರ: ಫ್ಲೆಕ್ಸ್‌ಗಳ ಹಾವಳಿಗೆ ಕಡಿವಾಣ ಹಾಕಿ
ಕಳೆದ ಕೆಲ ದಿನಗಳಿಂದ ಮೈಸೂರು ನಗರದ ಹೃದಯ ಭಾಗದಲ್ಲಿಯೇ ಪ್ಲೆಕ್ಸ್‌ಗಳ ಹಾವಳಿ ಹೆಚ್ಚಾಗಿದ್ದು, ಮಹಾನಗರ ಪಾಲಿಕೆ ಅಧಿಕಾರಿಗಳು ಇದನ್ನು ಕಂಡೂ ಕಾಣದಂತೆ ಇದ್ದಾರೆ.
ಮೈಸೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯವರು ಸಾರ್ವಜನಿಕರು ಪ್ಲಾಸ್ಟಿಕ್ ಬಳಸಿದರೆ, ಸಣ್ಣಪುಟ್ಟ ಅಂಗಡಿಯವರು ಪ್ಲಾಸ್ಟಿಕ್ ಮಾರಾಟ ಮಾಡಿದರೆ ಹಾಗೂ ಬ್ಯಾನರ್‌ಗಳನ್ನು ಅಳವಡಿಸಿದರೆ ಅವರನ್ನು ಹಿಡಿದು ದಂಡ ವಿಧಿಸುತ್ತಾರೆ. ಆದರೆ ಚುನಾಯಿತ ಜನಪ್ರತಿನಿಧಿಗಳೇ ರಸ್ತೆ ರಸ್ತೆಗಳಲ್ಲಿ ಬ್ಯಾನರ್‌ಗಳನ್ನು ಅಳವಡಿಸಿದರೆ ಅವರ ವಿರುದ್ಧ ಏಕೆ ಕ್ರಮಕೈಗೊಳ್ಳುವುದಿಲ್ಲ?
ನಗರದಲ್ಲಿ ಪ್ಲೆಕ್ಸ್, ಬ್ಯಾನರ್‌ಗಳನ್ನು ಬಳಸುವಂತಿಲ್ಲ ಎಂದು ಮಹಾನಗರ ಪಾಲಿಕೆಯೇ ಆದೇಶಿಸಿದೆ. ಇಷ್ಟಿದ್ದರೂ ನಗರದ ಮಧ್ಯ ಭಾಗದಲ್ಲಿಯೇ ಹಲವು ದಿನಗಳ ಕಾಲ ಬ್ಯಾನರ್‌ಗಳು ರಾರಾಜಿಸುತ್ತವೆ ಎಂದರೆ ಅದು ಅಧಿಕಾರಿಗಳ ಬೇಜವಾಬ್ದಾರಿತನವನ್ನು ತೋರುತ್ತದೆ. ಕೂಡಲೇ ಅಧಿಕಾರಿಗಳು ಎಚ್ಚೆತ್ತುಕೊಂಡು ಈ ಪ್ಲೆಕ್ಸ್ ಮತ್ತು ಬ್ಯಾನರ್‌ಗಳ ತೆರವಿಗೆ ಕ್ರಮಕೈಗೊಳ್ಳಬೇಕು.
-ರಕ್ಷಿತಾ: ಬೋಗಾದಿ, ಮೈಸೂರು.