Mysore
19
clear sky

Social Media

ಶುಕ್ರವಾರ, 02 ಜನವರಿ 2026
Light
Dark

ಸಿಎಂ ಸಿದ್ದರಾಮಯ್ಯ ಮೇಲೆ ಸುಳ್ಳು ಆರೋಪ ಮುಂದುವರೆದರೆ ಉಗ್ರ ಹೋರಾಟ: ಶುಭದಾಯಿನಿ ಎಚ್ಚರಿಕೆ

ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಪಾರದರ್ಶಕವಾಗಿ ಆಡಳಿತ ನಡೆಸುತ್ತಿದ್ದು ಅವರ ಏಳಿಗೆಯನ್ನು ಸಹಿಸದೆ ಜೆಡಿಎಸ್ ಮತ್ತು ಬಿಜೆಪಿ ಪಕ್ಷ ಇಲ್ಲ ಸಲ್ಲದ ಆರೋಪಗಳನ್ನು ಮಾಡುತ್ತಿದ್ದು ಇದೇ ರೀತಿಸುಳ್ಳು ಆರೋಪ ಮಾಡುವುದನ್ನು ಮುಂದುವರೆದರೆ ಕಾಂಗ್ರೆಸ್ ಮಹಿಳಾ ಘಟಕದ ವತಿಯಿಂದ ರಾಜ್ಯದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ರಾಜ್ಯ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷೆ ಶುಭದಾಯಿನಿ ಎಚ್ಚರಿಸಿದರು.

ಬುಧವಾರ ಮಂಡ್ಯದ ಪತ್ರಕರ್ತರ ಸಂಘದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾರದರ್ಶಕವಾಗಿ ಆಡಳಿತ ನಡೆಸುತ್ತಿದ್ದಾರೆ .ಅವರ 40 ವರ್ಷಗಳ ರಾಜಕೀಯ ಜೀವನದಲ್ಲಿ ಒಂದು ಕಪ್ಪು ಚುಕ್ಕೆ ಇಲ್ಲದಂತೆ ಪ್ರಾಮಾಣಿಕವಾಗಿ ನಡೆದುಕೊಂಡಿದ್ದಾರೆ ಎಂದರು.

ಮೈಸೂರು ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭ್ರಷ್ಟರು ಎಂಬಂತೆ ಬಿಂಬಿಸಲಾಗುತ್ತಿದೆ . ಮುಡಾ ಹಗರಣ ನಡೆದಿರುವುದು ಬಿಜೆಪಿ ಅಧಿಕಾರದಲ್ಲಿದ್ದ ಅವಧಿಯಲ್ಲಿ. ಆದರೆ ಈ ಆರೋಪವನ್ನು ಸಿದ್ದರಾಮಯ್ಯ ಅವರ ಮೇಲೆ ಹೊರಿಸಲಾಗುತ್ತಿದೆ ಎಂದು ಆಪಾದಿಸಿದರು .

ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ರಾಜ್ಯದಲ್ಲಿ ಮಾಡುತ್ತಿರುವ ಅಭಿವೃದ್ಧಿ ಕಾರ್ಯಗಳನ್ನು ಸಹಿಸದೆ ಅವರನ್ನು ಭ್ರಷ್ಟರು ಎಂದು ಬಿಂಬಿಸಲಾಗುತ್ತಿದೆ. ರಾಜ್ಯಪಾಲರ ಮೂಲಕ ಅಧಿಕಾರ ದುರುಪಯೋಗ ಮಾಡಿಕೊಂಡು ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ಹುನ್ನಾರ ನಡೆಸಲಾಗುತ್ತಿದೆ ಎಂದು ದೂರಿದರು.

ಬಿಜೆಪಿ ಮತ್ತು ಜೆಡಿಎಸ್ ಪಾದಯಾತ್ರೆಯಿಂದ ಜನರಿಗೆ ಯಾವುದೇ ರೀತಿಯ ಅನುಕೂಲ ಆಗುವುದಿಲ್ಲ .ಆದರೆ ರಾಜಕೀಯಕ್ಕಾಗಿ ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಟೀಕಿಸಿದರು .

ಕಾಂಗ್ರೆಸ್ ಸರ್ಕಾರ ಐದು ವರ್ಷಗಳ ಅವಧಿಯನ್ನು ಪೂರ್ಣಗೊಳಿಸುತ್ತದೆ. ಇದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ತಿಳಿಸಿದ ಅವರು, ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರಿಗೆ ಕೋಟ್ಯಾಂತರ ಕಾರ್ಯಕರ್ತರ ಬೆಂಬಲವಿದೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮುಡಾ ಮಾಜಿ ಅಧ್ಯಕ್ಷೆ ಹನ್ಸಿಯಾಬಾನು, ಗ್ರಾಮ ಪಂಚಾಯಿತಿ ಸದಸ್ಯ ಶಶಿಕಲಾ, ಸೋನಿಯಾ ಬ್ರಿಗೇಡ್ ನ ವೀಣಾ ಶಂಕರ್, ಶಕುಂತಲಾ ,ಜ್ಯೋತಿ ಉಪಸ್ಥಿತರಿದ್ದರು.

Tags:
error: Content is protected !!