Mysore
24
haze

Social Media

ಭಾನುವಾರ, 21 ಡಿಸೆಂಬರ್ 2025
Light
Dark

ಮೈಸೂರು ದಸರಾ 2024: ಆಗಸ್ಟ್‌ 21ರಂದು ವೀರನಹೊಸಳ್ಳಿಯಲ್ಲಿ ಗಜಪಯಣ

ಮೈಸೂರು: ವಿಶ್ವ ವಿಖ್ಯಾತ ದಸರಾ ಜಂಬೂ ಸವಾರಿಯಲ್ಲಿ ಪ್ರಧಾನ ಆಕರ್ಷಣೆಯಾದ ಆನೆಗಳನ್ನು ಸಾಂಪ್ರದಾಯಿಕವಾಗಿ ಕಾಡಿನಿಂದ ನಾಡಿಗೆ ಬೀಳ್ಕೊಡಲು ಆಗಸ್ಟ್ 21ರಂದು ವೀರನಹೊಸಳ್ಳಿಯಲ್ಲಿ ವಿಧ್ಯುಕ್ತವಾಗಿ ಗಜಪಯಣ ಆಯೋಜಿಸಲಾಗಿದೆ ಎಂದು ಶುಕ್ರವಾರ (ಆ.9) ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದರು.

ಮೈಸೂರು ಮೃಗಾಲಯದಲ್ಲಿ ಸಂದರ್ಶಕರ ಅನುಕೂಲಕ್ಕಾಗಿ ಲಗ್ಗೇಜು ಕೊಠಡಿ ಮತ್ತು ಹುಲಿ ಮನೆಯ ವೀಕ್ಷಣಾ ಗ್ಯಾಲರಿ ಉದ್ಘಾಟಿಸಿ ಮಾತನಾಡಿದ ಅವರು, 21ರಂದು ಗಜಪಯಣದ ದಿನ 9 ಆನೆಗಳಿಗೆ ಪೂಜೆ ಸಲ್ಲಿಸುವ ಮೂಲಕ ವಿಧ್ಯುಕ್ತವಾಗಿ ಗಜಪಯಣಕ್ಕೆ ನಾಂದಿ ಹಾಡಲಾಗುವುದು. ನಂತರ ಎರಡೇ ಹಂತದಲ್ಲಿ 5 ಆನೆಗಳು ಬರಲಿದ್ದು, 4 ಆನೆಗಳನ್ನು ತುರ್ತು ಮೀಸಲಿಟ್ಟುಕೊಳ್ಳಲಾಗುವುದು ಎಂದು ತಿಳಿಸಿದರು.

12ರಂದು ಉನ್ನತ ಮಟ್ಟದ ಸಭೆ: ಸೋಮವಾರ (ಆ.12) ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದ ಜಿಕೆವಿಕೆ ಆವರಣದಲ್ಲಿ ವಿಶ್ವ ಆನೆ ದಿನದಂದು ಮಾನವ–ಆನೆ ಸಂಘರ್ಷ ನಿರ್ವಹಣೆ ಕುರಿತಂತೆ ಅಂತಾರಾಷ್ಟ್ರೀಯ ಸಮಾವೇಶ ನಡೆಸಲಾಗುತ್ತಿದ್ದು, ಅಂದು ಮಧ್ಯಾಹ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಭೆ ನಡೆಯಲಿದೆ. ಈ ಸಭೆಯಲ್ಲಿ ಆನೆಗಳ ಕುರಿತಂತೆ ಚರ್ಚಿಸಲಾಗುವುದು ಮತ್ತು ಗಜಪಯಣದ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಲಾಗುವುದು ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

Tags:
error: Content is protected !!