Mysore
23
clear sky

Social Media

ಶನಿವಾರ, 03 ಜನವರಿ 2026
Light
Dark

ಕೊಡಗು ಜಿಲ್ಲೆಯಲ್ಲಿ ಮತ್ತೆ ಮುಂದುವರಿದ ಮಳೆ: ನಿನ್ನೆ ವಿರಾಜಪೇಟೆಯಲ್ಲಿ ಸುರಿದ ಧಾರಾಕಾರ ಮಳೆ

ಕೊಡಗು: ಕೊಡಗು ಜಿಲ್ಲೆ ವಿರಾಜಪೇಟೆಯಲ್ಲಿ ಕಳೆದ ತಡರಾತ್ರಿ ಭಾರೀ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿತ್ತು.

ಇದ್ದಕ್ಕಿದ್ದಂತೆ ಮಳೆ ಸುರಿದ ಪರಿಣಾಮ ರಸ್ತೆಗಳಲ್ಲಿ ನೀರು ನದಿಯಂತೆ ಹರಿಯಿತು. ಪರಿಣಾಮ ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿತ್ತು.

ಧಾರಾಕಾರ ಮಳೆಯಿಂದ ತಗ್ಗು ಪ್ರದೇಶಗಳೆಲ್ಲಾ ಸಂಪೂರ್ಣ ಜಲಾವೃತವಾಗಿ ಜನರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿತ್ತು. ರಾತ್ರಿ ವೇಳೆಗೆ ಮಳೆಯಾದ ಪರಿಣಾಮ ಜನರು ನೆಮ್ಮದಿಯಿಂದ ನಿದ್ದೆ ಮಾಡದೇ ಭಯದಲ್ಲೇ ಕಾಲ ಕಳೆಯುವ ಪರಿಸ್ಥಿತಿ ನಿರ್ಮಾಣವಾಗಿತ್ತು.

ಇನ್ನೂ ಮಳೆ ಇನ್ನು ಎರಡು ದಿನ ಮುಂದುವರಿಯಲಿದ್ದು, ಈ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಜನತೆ ಬಹಳ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

ಇನ್ನು ಭಾರೀ ಮಳೆಯಿಂದ ಕೊಡಗಿನಲ್ಲಿ ಕಾಫಿ ಬೆಳೆ ಕೂಡ ನಷ್ಟವಾಗಿದ್ದು, ರೈತರು ತೀವ್ರ ಕಂಗಾಲಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡುವಂತೆ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಇನ್ನು ಹಲವು ಗ್ರಾಮಗಳಿಗೆ ರಸ್ತೆ ಸಂಪರ್ಕವೇ ಇಲ್ಲದಂತಾಗಿದ್ದು, ಇದನ್ನು ಸರಿಪಡಿಸುವಂತೆ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

 

Tags:
error: Content is protected !!