ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ ಹಣದ ಬದಲು ಧಾನ್ಯ ನೀಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.
ಫಲಾನುಭವಿಗಳಿಗೆ 5 ಕೆಜಿ ಅಕ್ಕಿಯ ಜೊತೆಗೆ ಇನ್ನು ಮುಂದೆ ಬೇಳೆ, ಎಣ್ಣೆ ಹಾಗೂ ಸಕ್ಕರೆ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ.
ಫಲಾನುಭವಿಗಳಿಗೆ ಕೇವಲ 5 ಕೆಜಿ ಅಕ್ಕಿ ಮಾತ್ರ ಪೂರೈಸಲು ಸಾಧ್ಯವಾಗಿದ್ದ ಹಿನ್ನೆಲೆಯಲ್ಲಿ 5 ಕೆಜಿ ಅಕ್ಕಿಗೆ ಹಣವನ್ನು ಖಾತೆಗೆ ಹಾಕಲಾಗುತ್ತಿತ್ತು.
ಆದರೆ ರಾಜ್ಯ ಸರ್ಕಾರ ನಡೆಸಿದ ಸಮೀಕ್ಷೆಯಲ್ಲಿ ಶೇಕಡಾ.93ರಷ್ಟು ಫಲಾನುಭವಿಗಳು ಹೆಚ್ಚುವರಿಯಾಗಿ 5 ಕೆಜಿ ಅಕ್ಕಿಯ ಬದಲಿಗೆ ಇತರೆ ಅಗತ್ಯ ವಸ್ತುಗಳನ್ನು ಪಡೆಯಲು ಆಸಕ್ತಿ ತೋರಿದ್ದಾರೆಂದು ತಿಳಿದುಬಂದಿತ್ತು.
ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹಣದ ಬದಲಿಗೆ ಬೇಳೆ, ಎಣ್ಣೆ ಹಾಗೂ ಸಕ್ಕರೆ ನೀಡುವ ಕುರಿತು ಚಿಂತನೆ ನಡೆಸಿದ್ದು, ಈ ಬಗ್ಗೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.
ಈ ಮೂಲಕ ಫಲಾನುಭವಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಇನ್ನು ಮುಂದೆ 5 ಕೆಜಿ ಅಕ್ಕಿಯ ಜೊತೆಗೆ ಬೇಳೆ, ಎಣ್ಣೆ ಹಾಗೂ ಸಕ್ಕರೆಯೂ ಸಹ ಸಿಗಲಿದೆ.