ಬೆಂಗಳೂರು: ರಾಜ್ಯದಲ್ಲಿ ಗ್ಯಾರಂಟಿ ಯೋಜನೆ ಪರಿಷ್ಕರಣೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ ಎನ್ನಲಾಗಿದೆ.
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದ ಗದ್ದುಗೆ ಹಿಡಿಯಲು ಕಾರಣವಾಗಿದ್ದ ಗ್ಯಾರಂಟಿ ಯೋಜನೆಗಳಲ್ಲಿ ಮಾರ್ಪಾಡು ತರಲು ರಾಜ್ಯ ಸರ್ಕಾರ ಮುಂದಾಗಿದೆ.
ಗ್ಯಾರಂಟಿ ಯೋಜನೆಗೆ ಪಕ್ಷದ ಕೆಲ ಸಚಿವರೇ ಅಸಮಾಧಾನಗೊಂಡಿದ್ದ ಕಾರಣಕ್ಕಾಗಿ ಅರ್ಹ ಬಡವರಿಗೆ ಮಾತ್ರ ಗ್ಯಾರಂಟಿ ಯೋಜನೆ ಮೀಸಲಿಡಲು ಸರ್ಕಾರ ಮುಂದಾಗಿದೆ ಎನ್ನಲಾಗಿದೆ.
ಈ ಮೂಲಕ ಉಳಿತಾಯದ ಲೆಕ್ಕಾಚಾರವನ್ನು ಸರ್ಕಾರ ಗಮನದಲ್ಲಿಟ್ಟುಕೊಂಡಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಕಾಂಗ್ರೆಸ್ ಹೈಕಮಾಂಡ್ ಹಾಗೂ ಸಂಪುಟದ ಸಚಿವರು ಗ್ಯಾರಂಟಿ ಪರಿಷ್ಕರಣೆಗೆ ಒಲವು ತೋರಿದ್ದಾರೆ. ಉಳಿತಾಯ ಲೆಕ್ಕಾಚಾರ ಹಾಕಿಕೊಂಡಿರುವುದರಿಂದ ಬಿಪಿಎಲ್ ಮಾನದಂಡ ನಿಗದಿಪಡಿಸುವ ಚಿಂತನೆಯೂ ಸಹ ಇದೆ ಎನ್ನಲಾಗುತ್ತಿದೆ.
ಇನ್ನು ಗೃಹಲಕ್ಷ್ಮೀ ಹಾಗೂ ಅನ್ನಭಾಗ್ಯದಲ್ಲಿ ಪರಿಷ್ಕರಣೆ ಮಾಡಲು ಸಾಧ್ಯವಿದ್ದು, ಮುಂದಿನ ದಿನಗಳಲ್ಲಿ ಈ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತದೆ ಎನ್ನಲಾಗಿದೆ.