ಮಡಿಕೇರಿ: 78ನೇ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಕೊಡಗು ಜಿಲ್ಲಾ ಪಂಚಾಯತ್, ತಾಲೂಕ್ ಪಂಚಾಯತ್, ಶಿಕ್ಷಣ ಇಲಾಖೆ, ಗ್ರಾಮ ಪಂಚಾಯಿತಿ, ಪೊನ್ನಂಪೇಟೆ ಆಟೋ ಮಾಲೀಕರ ಹಾಗೂ ಚಾಲಕರ ಸಂಘದ ವತಿಯಿಂದ ಇಂದು
ಪೊನ್ನಂಪೇಟೆಯಲ್ಲಿ ಹರ್ ಘರ್ ತಿರಂಗ ಅಭಿಯಾನ ಮೂಲಕ ಮನೆಮನೆಗೆ ತ್ರಿವರ್ಣ ಧ್ವಜ ಮೆರವಣಿಗೆ ನಡೆಸಲಾಯಿತು.
ನಂತರ ವಿದ್ಯಾರ್ಥಿಗಳು ಇಲ್ಲಿನ ಬಸ್ ನಿಲ್ದಾಣದಲ್ಲಿ ಭಾರತದ ಭೂಪಟವನ್ನು ಹೋಲುವಂತೆ ರಚಿಸಿ ಭಾರತದ ಏಕತೆ ಬಗ್ಗೆ ಸಂದೇಶ ಸಾರಿದರು. ಸ್ವಾತಂತ್ರ್ಯ ದಿನದ ಮಹತ್ವದ ಬಗ್ಗೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಣಾಧಿಕಾರಿ ಅಪ್ಪಣ್ಣ ಸಾರ್ವಜನಿಕರಿಗೆ ತಿಳಿಸಿದರು. ಇಲ್ಲಿನ ಕೆ.ಪಿ.ಎಸ್ ಶಾಲೆಯ ಮುಖ್ಯೋಪಾಧ್ಯಾಯರು ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ರಾಷ್ಟ್ರಧ್ವಜ ಸ್ವೀಕರಿಸಿದ ಶಾಸಕ
ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ “ಹರ್ ಘರ್ ತಿರಂಗಾ” ಅಭಿಯಾನದ ಅಂಗವಾಗಿ ಕೇಂದ್ರ ಸರ್ಕಾರದ ಸಚಿವಾಲಯದಿಂದ ವಿರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಕಳುಹಿಸಿಕೊಡಲಾದ ರಾಷ್ಟ್ರಧ್ವಜವನ್ನು ಶಾಸಕರಾದ ಎ. ಎಸ್ ಪೊನ್ನಣ್ಣನವರು ಸ್ವೀಕರಿಸಿದರು. ಈ ಸಂದರ್ಭ ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು.