Mysore
28
few clouds

Social Media

ಶುಕ್ರವಾರ, 20 ಡಿಸೆಂಬರ್ 2024
Light
Dark

ಅರಸೀಕೆರೆ ಬಿಜೆಪಿ ಮಾಜಿ ಶಾಸಕ ಎ.ಎಸ್‌ ಬಸವರಾಜು ನಿಧನ

ಬೆಂಗಳೂರು: ಅರಸೀಕೆರೆ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಹಾಗೂ ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ವಾರ ಆಪ್ತ ಎ.ಎಸ್‌ ಬಸವರಾಜು ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ.

75 ವರ್ಷದ ಬಸವರಾಜು ಅವರು ಕೆಲ ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಅವರಿಗೆ ಚಿಕಿತ್ಸೆ ಫಲಕಾರಿಯಾಗದೇ ನಿಧನ ಹೊಂದಿದ್ದಾರೆ. ಇಂದು (ಆ.16) ಅರಸೀಕೆರೆಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ತಮ್ಮ ಆಪ್ತರ ಅಗಲಿಕೆಗೆ ಮಾಜಿ ಸಿಎಂ ಟ್ವೀಟ್‌ ಮೂಲಕ ಸಂತಾಪ ಸೂಚಿಸಿದ್ದಾರೆ. ಅರಸೀಕೆರೆ ವಿಧಾನಸಭಾ ಕ್ಷೇತ್ರದ ಸರಳ ಸಜ್ಜನಿಕೆಯ ವ್ಯಕ್ತಿತ್ವದ ಮಾಜಿ ಶಾಸಕರಾದ ಶ್ರೀ ಎ.ಎಸ್.ಬಸವರಾಜು ಅವರ ನಿಧನಕ್ಕೆ ಸಂತಾಪ ಕೋರುವೆ.
2004-2007 ರವರೆಗೆ ಬಿಜೆಪಿ ಶಾಸಕರಾಗಿ ಸೇವೆ ಸಲ್ಲಿಸಿ ಪಕ್ಷ ನಿಷ್ಠರು ಮಾತ್ರವಲ್ಲದೇ ಸಂಘ ಸೇವಕರಾಗಿಯೂ ಬಸವರಾಜು ತಮ್ಮದೇ ಆದ ಘನ ವ್ಯಕ್ತಿತ್ವ ಮೈಗೂಡಿಸಿಕೊಂಡಿದ್ದವರು.

ಮಾನ್ಯ ಬಸವರಾಜು ಅವರ ಕುಟುಂಬ ವರ್ಗದವರಿಗೆ ಹಾಗೂ ಅಭಿಮಾನಿಗಳಿಗೆ ಅಗಲಿಕೆಯ ನೋವು ಸಹಿಸುವ ಶಕ್ತಿಯನ್ನು ಭಗವಂತನು ದಯಪಾಲಿಸಲಿ. ಮೃತರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಬರೆದುಕೊಂಡು ಅಂತಿಮ ನಮನ ಸಲ್ಲಿಸಿದ್ದಾರೆ.

Tags: