Mysore
26
few clouds

Social Media

ಶನಿವಾರ, 27 ಡಿಸೆಂಬರ್ 2025
Light
Dark

ಓದುಗರ ಪತ್ರ| ದೇಶದಲ್ಲಿ ಹೆಣ್ಣುಮಕ್ಕಳಿಗೆ ಎಲ್ಲಿದೆ ಸುರಕ್ಷತೆ?

ಕೊಲ್ಕತ್ತಾದಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಬರ್ಬರವಾಗಿ ಹತ್ಯೆ ಮಾಡಿರುವ ಪ್ರಕರಣ ದೇಶವನ್ನೇ ಬೆಚ್ಚಿ ಬೀಳಿಸಿದ್ದು, ದೇಶದಲ್ಲಿ ಹೆಣ್ಣುಮಕ್ಕಳಿಗೆ ರಕ್ಷಣೆ ಇದೆಯೇ ಎಂಬ ಪ್ರಶ್ನೆ ಮತ್ತೆ ಮುನ್ನೆಲೆಗೆ ಬಂದಿದೆ.

ಈ ಕೃತ್ಯವನ್ನು ಖಂಡಿಸಿ ದೇಶದ ಹಲವೆಡೆ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಕೊಲ್ಕತ್ತಾದ ಹೈಕೋರ್ಟ್ ಕೂಡ ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿದ್ದು, ಸೂಕ್ತ ತನಿಖೆಗೆ ಆದೇಶಿಸಿದೆ.

ಇದರ ಬೆನ್ನಲ್ಲೆ ಕೊಲ್ಕತ್ತಾದಲ್ಲಿ ಪ್ರತಿಭಟನೆ ನಿರತ JUST, ವೈದ್ಯರ ಮೇಲೆ ಹಾಗೂ ಆಸ್ಪತ್ರೆಯ ಮೇಲೆ ” for ಕಿಡಿಗೇಡಿಗಳ ಗುಂಪೊಂದು ದಾಳಿ ನಡೆಸಿದ್ದು, ಆಸ್ಪತ್ರೆಯನ್ನು ಧ್ವಂಸ ಮಾಡಿರುವುದಲ್ಲದೇ ವೈದ್ಯರ ಮೇಲೆಯೂ ಹಲ್ಲೆ ಮಾಡಿದೆ. ಈ ಘಟನೆಗಳನ್ನು ನೋಡಿದರೆ, ದೇಶದಲ್ಲಿ ಮಹಿಳೆಯರಿಗೆ ರಕ್ಷಣೆಯೇ ಇಲ್ಲವೇನೋ ಅನಿಸುತ್ತದೆ. ಅಪ್ರಾಪ್ರ ವಯಸ್ಸಿನ ಬಾಲಕಿಯರಿಂದ ಹಿಡಿದು ಜೀವ ಉಳಿಸುವ ವೈದ್ಯರನ್ನೂ ಬಿಡದೆ ಅತ್ಯಾಚಾರ ಮಾಡಿ ಕೊಲೆ ಮಾಡುವಂತಹ ದುಷ್ಕೃತ್ಯಗಳು ಈ ದೇಶದಲ್ಲಿ ನಡೆಯುತ್ತಿವೆ ಎಂದರೆ ಈ ದೇಶದ ಆಡಳಿತ ವ್ಯವಸ್ಥೆ ಮಹಿಳೆಯರಿಗೆ ಎಷ್ಟರ ಮಟ್ಟಿಗೆ ರಕ್ಷಣೆ ಒದಗಿಸಿದೆ ಎಂಬುದು ತಿಳಿಯುತ್ತದೆ.

ಹೆಣ್ಣು ಮಕ್ಕಳು ತಾವು ಓದುವ, ಕೆಲಸ ಮಾಡುವ ಸ್ಥಳಗಳಲ್ಲಿಯೇ ದೌರ್ಜನ್ಯಗಳನ್ನು ಎದುರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಅಲ್ಲದೆ ಕೌಟುಂಬಿಕವಾಗಿಯೂ ಅವರು ಅನೇಕ ಕಿರುಕುಳಗಳನ್ನು ಎದುರಿಸುತ್ತಿದ್ದಾರೆ. ಇದಕ್ಕೆ ಇತ್ತೀಚೆಗೆ ರಾಜಸ್ಥಾನದಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಬೈಕ್‌ನಲ್ಲಿ ಕಟ್ಟಿ ಗ್ರಾಮದ ಬೀದಿ ಬೀದಿಗಳಲ್ಲಿ ಎಳೆದಾಡಿ ಹಿಂಸಿಸಿರುವ ಘಟನೆಯೇ ಸಾಕ್ಷಿ. ಇಂತಹ ದೌರ್ಜನ್ಯ ಪ್ರಕರಣಗಳು ನಾಗರಿಕ ಸಮಾಜವನ್ನು ತಲೆತಗ್ಗಿಸುವಂತೆ ಮಾಡಿದ್ದು, ಸರ್ಕಾರ ಇಂತಹ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕಿದೆ. T

-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ.

Tags:
error: Content is protected !!