Mysore
24
overcast clouds

Social Media

ಸೋಮವಾರ, 17 ಆಗಸ್ಟ್ 2026
Light
Dark

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ: ಸಂಸದ ಯದುವೀರ್‌ ಒಡೆಯರ್‌ ಹೇಳಿದ್ದಿಷ್ಟು

ಮೈಸೂರು: ರಾಜ್ಯಪಾಲರು ಸಂವಿಧಾನಾತ್ಮಕವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕ್ರಮ ಕೈಗೊಂಡಿದ್ದಾರೆ ಎಂದು ಮೈಸೂರು-ಕೊಡಗು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾತನಾಡಿದ ಸಂಸದ ಯದುವೀರ್‌ ಒಡೆಯರ್‌ ಅವರು, ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರು ಯಾವ ಕ್ರಮ ಕೈಗೊಳ್ಳಲಿದ್ದಾರೆ ಎಂದು ಕಾದು ನೋಡಬೇಕಿದೆ.

ವಾಲ್ಮೀಕಿ ಹಾಗೂ ಮುಡಾದಲ್ಲಿ ನಡೆದಿರುವ ಅಕ್ರಮಗಳ ಕುರಿತು ಬಿಜೆಪಿ ಹೋರಾಟ ನಡೆಸುತ್ತಾ ಬಂದಿತ್ತು. ಇದೀಗ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದರಿಂದ ನಿಷ್ಪಕ್ಷಪಾತ ತನಿಖೆ ನಡೆದು ತಪ್ಪಿತಸ್ಥರಿಗೆ ಶಿಕ್ಷೆಯಾಗುವ ವಿಶ್ವಾಸವಿದೆ ಎಂದರು.

ರಾಜ್ಯಪಾಲರ ಹುದ್ದೆ ಸಂವಿಧಾನಾತ್ಮಕವಾದದ್ದು, ಅವರು ಸಂವಿಧಾನಾತ್ಮಕವಾಗಿಯೇ ಕ್ರಮ ಕೈಗೊಂಡಿದ್ದಾರೆ. ಪ್ರತಿಪಕ್ಷವಾಗಿ ಬಿಜೆಪಿ ಹೋರಾಟ ಮುಂದುವರಿಸಲಿದೆ ಎಂದರು.

Tags:
error: Content is protected !!