Mysore
15
few clouds

Social Media

ಸೋಮವಾರ, 05 ಜನವರಿ 2026
Light
Dark

ರಾಜ್ಯಪಾಲರ ವಿರುದ್ಧ ನಾಳೆ ರಾಜ್ಯಾದ್ಯಂತ ಪ್ರತಿಭಟನೆ: ಡಿಸಿಎಂ ಡಿಕೆ ಶಿವಕುಮಾರ್‌

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರು ಕೇಂದ್ರ ಸರ್ಕಾರ ಹಾಗೂ ಬಿಜೆಪಿಯ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ. ಅವರ ಧೋರಣೆಯ ವಿರುದ್ಧ ಸೋಮವಾರ(ಆ.19) ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಡಿಸಿಎಂ ಹೇಳಿದ್ದಾರೆ.

ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಮುಡಾ ಪ್ರಕರಣದಲ್ಲಿ ಸಿಎಂ ಅವರ ಯಾವುದೇ ಪಾತ್ರವಿಲ್ಲ. ಆದರೂ ಬೇಕಂತಲೇ ಅಕ್ರಮವೆಂದು ಅವರ ವಿರುದ್ಧ ಎತ್ತಿ ಕಟ್ಟಲಾಗುತ್ತಿದೆ. ರಾಜ್ಯಪಾಲರಿಂದ ಪ್ರಜಾಪ್ರಭುತ್ವದ ಕಗ್ಗೊಳೆ ನಡೆದಿದೆ ಎಂದು ದೂರಿದರು.

ಸೋಮವಾರ ಎಲ್ಲಾ ಜಿಲ್ಲಾಕೇಂದ್ರಗಳಲ್ಲೂ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ಪ್ರತಿಭಟನೆ ನಡೆಸಿ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಲಿದ್ದಾರೆ. ಶಾಂತಿಯುತವಾಗಿ ಪ್ರತಿಭಟನೆ ನಡೆಸಬೇಕು. ಕೆಲ ಕಿಡಿಗೇಡಿಗಳು ಪ್ರತಿಭಟನೆಯಲ್ಲಿ ನುಸಳಿಕೊಂಡು ಕಲ್ಲು ಹೊಡೆದು, ಅಶಾಂತಿಯ ವಾತಾವರಣ ಸೃಷ್ಟಿಸಬಹುದು. ಅದರ ಬಗ್ಗೆ ಎಚ್ಚರದಿಂದ ಇರುವಂತೆ ಪಕ್ಷದ ಮುಖಂಡರಿಗೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

Tags:
error: Content is protected !!