Mysore
25
overcast clouds

Social Media

ಸೋಮವಾರ, 17 ಆಗಸ್ಟ್ 2026
Light
Dark

ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟ ಮೇಲೆ ಸಿದ್ದರಾಮಯ್ಯ ರಾಜೀನಾಮೆ ಕೊಡಲೇಬೇಕು: ಮಾಜಿ ಸಚಿವ ಎ.ಮಂಜು ಆಗ್ರಹ

ಬೆಂಗಳೂರು: ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟ ಮೇಲೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡಲೇಬೇಕು ಎಂದು ಮಾಜಿ ಸಚಿವ ಎ.ಮಂಜು ಆಗ್ರಹಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಜೆಡಿಎಸ್‌ ಶಾಸಕ ಹಾಗೂ ಮಾಜಿ ಸಚಿವ ಎ.ಮಂಜು ಅವರು, ಸಿದ್ದರಾಮಯ್ಯ ಹಠ ಮಾಡದೇ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದ್ದಾರೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟಿದ್ದಾರೆ. ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟ ಮೇಲೆ ರಾಜೀನಾಮೆ ಕೊಡಬೇಕು ಅಂತ ಕಾನೂನಿನಲ್ಲಿ ಇಲ್ಲ. ಆದರೆ ನೈತಿಕತೆ ಅಂತ ಇದೆ. ಸಿಎಂ ಸಿದ್ದರಾಮಯ್ಯ ಲಾಯರ್‌ ಆಗಿದ್ದವರು. ಆದ್ದರಿಂದ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಟ್ಟು ತನಿಖೆಗೆ ಸಹಕಾರ ನೀಡಬೇಕು. ಅವರು ರಾಜೀನಾಮೆ ಕೊಡಲ್ಲ ಅಂದರೆ ಕಾನೂನು ಇದೆ. ಅದರ ಪ್ರಕಾರವೇ ಕ್ರಮ ಆಗುತ್ತದೆ ಎಂದರು.

ಸಿಎಂ ಸಿದ್ದರಾಮಯ್ಯ ಮುಡಾದಲ್ಲಿ 14 ಸೈಟ್‌ ಪಡೆದಿರೋದು ನಿಜ ಎಂದು ಸಾಬೀತಾಗಿದೆ. ಬದಲಾವಣೆ ಸೈಟ್‌ ಪಡೆದುಕೊಂಡಿದ್ದಾರೆ. ಇದನ್ನು ಸಿಎಂ ಅವರೇ ಒಪ್ಪಿಕೊಂಡಿದ್ದಾರೆ. ಆದ್ದರಿಂದ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಲೇಬೇಕು. ನಿರ್ದೋಷಿ ಅಂತ ಆದ ಮೇಲೆ ಮತ್ತೆ ಸಿದ್ದರಾಮಯ್ಯ ಸಿಎಂ ಆಗಲಿ ಎಂದರು.

 

Tags:
error: Content is protected !!