ಕೊಚ್ಚಿ: ಜ್ವರ ಹಾಗೂ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿರುವ ಮಲಯಾಳಂ ಸೂಪರ್ ಸ್ಟಾರ್ ಮೋಹನ್‌ಲಾಲ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.
64 ವರ್ಷದ ಮೋಹನ್ ಲಾಲ್ ಅವರು ತೀವ್ರ ಜ್ವರ, ಉಸಿರಾಟದ ತೊಂದರೆ ಹಾಗೂ ಸ್ನಾಯು ನೋವಿನಿಂದ ಬಳಲುತ್ತಿದ್ದು, ಅವರನ್ನು ಕೊಚ್ಚಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮೋಹನ್ ಲಾಲ್ ಅವರಿಗೆ ವೈರಲ್ ಉಸಿರಾಟದ ಸೋಂಕಿರುವ ಶಂಕೆ ವ್ಯಕ್ತವಾಗಿದ್ದು, ಐದು ದಿನಗಳ ವಿಶ್ರಾಂತಿಯೊಂದಿಗೆ ಔಷಧಿಗಳನ್ನು ತೆಗೆದುಕೊಳ್ಳುವಂತೆ ಹಾಗೂ ಜನರಿರುವ ಕಡೆ ಸೇರದಂತೆ ಸೂಚನೆ ನೀಡಲಾಗಿದೆ.
ಗುಜರಾತ್‌ನಲ್ಲಿ ಶೂಟಿಂಗ್ ಪೂರ್ಣಗೊಳಿಸಿದ ನಂತರ ಅವರು ಕೊಚ್ಚಿಗೆ ಮರಳಿದ್ದರು. ಈ ವೇಳೆ ಅವರಿಗೆ ಜ್ವರ ಕಾಣಿಸಿಕೊಂಡಿದೆ.
ಇನ್ನು ಟೆರಿಟೋರಿಯಲ್ ಆರ್ಮಿಯಲ್ಲಿ ಲೆಫ್ಟಿನೆಂಟ್ ಕರ್ನಲ್ ಕೂಡ ಆಗಿರುವ ಅವರು, 400ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಮೋಹನ್ ಲಾಲ್ ಅವರು ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಪ್ರಾರ್ಥನೆ ಸಲ್ಲಿಸಿದ್ದಾರೆ.