Mysore
26
clear sky

Social Media

ಸೋಮವಾರ, 29 ಡಿಸೆಂಬರ್ 2025
Light
Dark

ಪ್ರಾಸಿಕ್ಯೂಷನ್‌: ಹೈಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಾಪಾಲರು ತಮ್ಮ ವಿರುದ್ಧ ವಿಚಾರಣೆ(ಪ್ರಾಸಿಕ್ಯೂಷನ್)ಗೆ ಅನುಮತಿ ನೀಡಿರುವ ಕ್ರಮವನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಇಂದು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಈ ಮೂಲಕ ತಮ್ಮ ವಿರುದ್ಧದ ಆರೋಪಗಳಿಗೆ ಕಾನೂನು ಮೂಲಕವೇ ಉತ್ತರ ಕೊಡಲು ಸಿಎಂ ಮುಂದಾಗಿದ್ದಾರೆ.

ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಾಪಾಲರ ನಿರ್ಧಾರವನ್ನು ರದ್ದುಪಡಿಸುವಂತೆ ರಿಟ್‌ ಅರ್ಜಿಯಲ್ಲಿ ಸಿದ್ದರಾಮಯ್ಯ ಹೈಕೋರ್ಟ್ ಗೆ ಮನವಿ ಮಾಡಿದ್ದಾರೆ.

ರಾಜ್ಯಪಾಲರ ನಿರ್ಧಾರ ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲು ಕೂಡ ಸಿಎಂ ಸಿದ್ದರಾಮಯ್ಯ ಚಿಂತನೆ ನಡೆಸಿ, ಆ ಮೂಲಕ ರಾಷ್ಟ್ರಮಟ್ಟದಲ್ಲೂ ರಾಜ್ಯಾಪಾಲರ ಕ್ರಮ ಪ್ರತಿಧ್ವನಿಸುವಂತೆ ಮಾಡುವ ಲೆಕ್ಕಾಚಾರವಿತ್ತು. ಆದರೆ, ಸುಪ್ರೀಂಕೋರ್ಟ್‌ ಮೊರೆ ಹೋದರೆ, ಪ್ರಕರಣ ಹೈಕೋರ್ಟ್‌ಗೆ ವರ್ಗಾವಣೆಯಾಗಬಹುದು ಎಂದು ಹಿರಿಯ ವಕೀಲರು ಸಲಹೆ ನೀಡಿದ್ದಾರೆ. ಹೀಗಾಗಿ ಹೈಕೋರ್ಟ್‌ಲ್ಲೇ ಇಂದು ಅರ್ಜಿ ಸಲ್ಲಿಸಿದ್ದಾರೆ.

Tags:
error: Content is protected !!