ಮಡಿಕೇರಿ: ಮೂರ್ನಾಡು 33/11 ಕೆವಿ ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಎಫ್7 ಹೊದ್ದೂರು ಫೀಡರ್ ವಿದ್ಯುತ್ ಮಾರ್ಗದಲ್ಲಿ ತುರ್ತು ನಿರ್ವಹಣೆ ಕಾಮಗಾರಿ ನಡೆಸಬೇಕಿರುವುದರಿಂದ ಆಗಸ್ಟ್, 20 ರಂದು ಬೆಳಗ್ಗೆ 10 ರಿಂದ ಸಂಜೆ 05 ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.
ಆದ್ದರಿಂದ ಚೋನಕೆರೆ, ಕೊಳಕೇರಿ, ಕುಂಜಿಲ, ಕಕ್ಕಬ್ಬೆ, ನಾಲಡಿ, ಯವಕಪಾಡಿ, ಎಮ್ಮೆಮಾಡು, ಪಡಿಯಾಣಿ, ಕುರ್ಲಿ, ನೆಲಜಿ, ಬಲ್ಲಮಾವಟಿ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅನಿತಾ ಬಾಯಿ ಕೋರಿದ್ದಾರೆ.