ಚಾಮರಾಜನಗರ: ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆರಾಯನ ಆರ್ಭಟ ಮುಂದುವರಿದಿದ್ದು, ಕೆಲವು ಜಿಲ್ಲೆಗಳಲ್ಲಿ ಆರ್ಭಟ ಕಡಿಮೆಯಾಗಿದೆ.
ಇನ್ನು ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಮಳೆರಾಯ ಅಬ್ಬರಿಸಿ ಬೊಬ್ಬಿರಿದಿದ್ದು, ವರುಣಾರ್ಭಟಕ್ಕೆ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿತ್ತು. ಭಾರೀ ಮಳೆಯಿಂದ ಜಿಲ್ಲೆಯ ಹಲವು ರಸ್ತೆಗಳು ಜಲಾವೃತವಾದ ಘಟನೆ ನಡೆದಿದೆ.
ಚಾಮರಾಜನಗರ ಜಿಲ್ಲಾ ಕೇಂದ್ರದಲ್ಲಿ ಒಂದು ಗಂಟೆಗೂ ಅಧಿಕ ಕಾಲ ಭಾರೀ ಮಳೆ ಸುರಿದಿದ್ದು, ರಸ್ತೆಗಳ ಮೇಲೆಲ್ಲಾ ಮಳೆ ನೀರು ಹೊಳೆಯಂತೆ ಹರಿಯುತ್ತಿತ್ತು. ಪರಿಣಾಮ ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿತ್ತು.
ಇನ್ನು ರಾಜ್ಯಾದ್ಯಂತ ಇಂದಿನಿಂದ ಮಳೆ ಚುರುಕುಪಡೆದುಕೊಳ್ಳಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಜನತೆ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ.