ಚಿಕ್ಕಬಳ್ಳಾಪುರ: ಜನರ ವಿಶ್ವಾಸ ಕಳೆದುಕೊಂಡ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲೇಬೇಕು ಎಂದು ನಟ ಚೇತನ್ ಅಹಿಂಸಾ ಆಗ್ರಹಿಸಿದ್ದಾರೆ.
ವಾಲ್ಮೀಕಿ ಹಾಗೂ ಮುಡಾ ಹಗರಣಗಳು ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಕಂಗೆಡಿಸಿವೆ. ಇನ್ನು ಸಿಎಂ ಸಿದ್ದರಾಮಯ್ಯ ಜನರ ವಿಶ್ವಾಸ ಕಳೆದುಕೊಂಡಿದ್ದು, ಅವರು ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಲಿ ಎಂದು ಆಗ್ರಹಿಸಿದರು.
ಬಡವರು, ದಲಿತರು, ಆದಿವಾಸಿಗಳು, ರೈತರು ಸೇರಿದಂತೆ ಎಲ್ಲರಿಗೂ ನೋವುಂಟು ತರುವ ಮೂಲಕ ಸಿದ್ದರಾಮಯ್ಯ ಈಗಾಗಲೇ ಅನ್ಯಾಯದ ವ್ಯವಸ್ಥೆಯನ್ನು ಇನ್ನು ಹೆಚ್ಚು ಅನ್ಯಾಯದಂತೆ ಮಾಡಿದ್ದಾರೆ.
ಆರು ವರ್ಷಗಳಿಗೂ ಹೆಚ್ಚು ಕಾಲ ಸಿದ್ದರಾಮಯ್ಯ ಸಿಎಂ ಆಗಿ ಆಡಳಿತ ಮಾಡಿದ್ದಾರೆ. ಹೀಗಾಗಿ ರಾಜೀನಾಮೆ ನೀಡಲಿ. ಈ ಮೂಲಕ ಬೇರೆಯವರಿಗೆ ಅವಕಾಶ ನೀಡಲಿ ಎಂದು ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.




