Mysore
15
clear sky

Social Media

ಶನಿವಾರ, 27 ಡಿಸೆಂಬರ್ 2025
Light
Dark

ಮಂತ್ರಾಲಯದಲ್ಲಿ ರಾಯರ 353ನೇ ಆರಾಧನಾ ಮಹೋತ್ಸವದ ಸಂಭ್ರಮ

ಆಂಧ್ರಪ್ರದೇಶ: ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 353ನೇ ಆರಾಧನಾ ಮಹೋತ್ಸವದ ಹಿನ್ನೆಲೆಯಲ್ಲಿ ಮಂತ್ರಾಲಯದಲ್ಲಿ ಪೂರ್ವಾರಾಧನೆ ಸಂಭ್ರಮ ಮನೆ ಮಾಡಿದೆ.

ಇಂದು ಬೆಳಿಗ್ಗೆಯಿಂದಲೇ ವಿಶೇಷ ಪೂಜಾ ಕೈಂಕರ್ಯದ ಜೊತೆಗೆ ಉತ್ಸವಗಳು ನಡೆದಿದ್ದು, ಆರಾಧನಾ ವೈಭವವನ್ನು ಸಾರ್ವಜನಿಕರು ಕಣ್ತುಂಬಿಕೊಳ್ಳುತ್ತಿದ್ದಾರೆ.

ಗುರು ರಾಘವೇಂದ್ರ ಸ್ವಾಮಿಗಳು ಸಶರೀರವಾಗಿ ವೃಂದಾವನಸ್ಥರಾದ ದಿನದ ಮುನ್ನ ದಿನವನ್ನು ಪೂರ್ವಾರಾಧನೆಯಾಗಿ ಮಂತ್ರಾಲಯ ಸೇರಿದಂತೆ ದೇಶದ ಎಲ್ಲಾ ರಾಯರ ಮಠಗಳಲ್ಲಿ ಸಂಭ್ರಮದಿಂದ ಆಚರಿಸಲಾಗುತ್ತದೆ.

ಮಠದ ಪ್ರಾಂಗಣದಲ್ಲಿ ರಾಯರು ರಚಿಸಿರುವ ಪರಿಮಳ ಗ್ರಂಥವನ್ನು ಪಲ್ಲಕ್ಕಿಯಲ್ಲಿ ಇಟ್ಟು ಮಠದ ಪ್ರಾಂಗಣದಲ್ಲಿ ಪಲ್ಲಕ್ಕಿ ಉತ್ಸವ ನೆರವೇರಿಸಲಾಯಿತು.

ರಾಯರು 700 ವರ್ಷಗಳ ವೃಂದಾನವಲ್ಲಿರುತ್ತಾರೆ ಎನ್ನುವ ಪ್ರತೀತಿಯಿದೆ. ಈ ಹಿನ್ನೆಲೆಯಲ್ಲಿ ಪ್ರತಿ ವರ್ಷ ಪೂರ್ವಾರಾಧನೆ ಹಿನ್ನೆಲೆಯಲ್ಲಿ ವಿಶೇಷ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಮಂತ್ರಾಲಯದಲ್ಲಿ ನಡೆಯುತ್ತವೆ.

ಇಂದಿನಿಂದ ಮೂರು ದಿನಗಳು ಆರಾಧನಾ ಮಹೋತ್ಸವದ ಸಂಭ್ರಮ ಮನೆಮಾಡಿದ್ದು, ಮಂತ್ರಾಲಯಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಸಾರ್ವಜನಿಕರು ಭೇಟಿ ನೀಡಿ ರಾಯರ ದರ್ಶನ ಪಡೆಯುತ್ತಿದ್ದಾರೆ.

 

Tags:
error: Content is protected !!