Mysore
17
overcast clouds

Social Media

ಗುರುವಾರ, 08 ಜನವರಿ 2026
Light
Dark

ನೂರು ಜನ ಸಿದ್ದರಾಮಯ್ಯ ಬಂದ್ರೂ ನನ್ನನ್ನು ಬಂಧಿಸಲು ಸಾಧ್ಯವಿಲ್ಲ ಎಂದ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ನೂರು ಜನ ಸಿದ್ದರಾಮಯ್ಯನಂತಹವರು ಬಂದರೂ ನನ್ನನ್ನು ಬಂಧಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಸಿಎಂ ಸಿದ್ದರಾಮಯ್ಯಗೆ ಸವಾಲು ಹಾಕಿದ್ದಾರೆ.

ಅಗತ್ಯ ಬಿದ್ದರೆ ಕುಮಾರಸ್ವಾಮಿ ಅವರನ್ನು ಬಂಧನ ಮಾಡುತ್ತೇವೆ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಸಿಎಂ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ನನಗೆ ಭಯ ಶುರುವಾಗಿದೆ ಎಂದು ಸಿಎಂ ಹೇಳುತ್ತಾರೆ. ನನಗೆ ಯಾವುದೇ ಭಯ ಶುರುವಾಗಿಲ್ಲ. ನನ್ನನ್ನು ನೋಡಿದ್ರೆ ಹಾಗೆ ಅನ್ನಿಸುತ್ತಾ ಎಂದು ಮಾಧ್ಯಮಗಳಿಗೆ ಪ್ರಶ್ನೆ ಮಾಡಿದರು.

ಒಂದು ವಾರದಿಂದ ಸಿಎಂ ಹೇಗೆ ನಡೆದುಕೊಂಡಿದ್ದಾರೆ ಎಂಬುದನ್ನು ಇಡೀ ರಾಜ್ಯದ ಜನತೆ ನೋಡುತ್ತಿದ್ದಾರೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಅನೇಕ ದಾಖಲೆಗಳಿವೆ. ಇಂತಹ ಭಂಡ ಮುಖ್ಯಮಂತ್ರಿಯನ್ನ ನಾನೂ ಎಲ್ಲೂ ನೋಡಿಲ್ಲ ಎಂದು ವಾಗ್ದಾಳಿ ನಡೆಸಿದರು.

 

Tags:
error: Content is protected !!