Mysore
23
broken clouds

Social Media

ಶುಕ್ರವಾರ, 02 ಅಕ್ಟೋಬರ್ 2026
Light
Dark

ನನ್ನ ವಿರುದ್ಧದ ಆರೋಪ ಸಾಬೀತಾದ್ರೆ ಶಾಸಕ ಸ್ಥಾನಕ್ಕೆ ರಾಜೀನಾಮೆ; ಶಾಸಕ ಶ್ರೀವತ್ಸ

ಮೈಸೂರು: ಶಾಸಕ ಶ್ರೀವತ್ಸ ಮುಡಾದಲ್ಲಿ ಜಿ-ಕ್ಯಾಟಗರಿ ಸೈಟ್‌ ಪಡೆದಿದ್ದಾರೆ ಎಂದು ಆರೋಪಿಸಿದ್ದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ಗೆ ಶಾಸಕ ಶ್ರೀವತ್ಸ ತಿರುಗೇಟು ಕೊಟ್ಟಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಟಿ.ಎಸ್.ಶ್ರೀವತ್ಸ ಅವರು, ನನ್ನ ವಿರುದ್ಧದ ಆರೋಪ ಸಾಬೀತಾದರೇ 24 ಗಂಟೆಗಳಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ಸೈಟ್‌ ಬಗ್ಗೆ ಒಂದು ಸಣ್ಣ ದಾಖಲೆ ಬಿಡುಗಡೆ ಮಾಡಿದರೂ ರಾಜಕೀಯ ನಿವೃತ್ತಿ ಹೊಂದುತ್ತೇನೆ. ಒಂದು ವೇಳೆ ನನ್ನ ಮೇಲಿನ ಆರೋಪ ಸುಳ್ಳಾದರೆ ಲಕ್ಷ್ಮಣ್‌ ರಾಜಕೀಯ ನಿವೃತ್ತಿ ಹೊಂದುತ್ತಾರಾ ಎಂದು ಸವಾಲು ಹಾಕಿದರು.

ಲಕ್ಷ್ಮಣ್‌ ಅವರು ಮಾತನಾಡುವಾಗ ಜವಾಬ್ದಾರಿಯುತವಾಗಿ ಮಾತನಾಡಬೇಕು. ಎಲುಬಿಲ್ಲದ ನಾಲಿಗೆಯಲ್ಲಿ ಬಾಯಿಗೆ ಬಂದಂತೆ ಮಾತನಾಡಬಾರದು. ನನ್ನ ಹಾಗೂ ನನ್ನ ಕುಟುಂಬದ ಹೆಸರಿನಲ್ಲಿ ಮುಡಾಗೆ ಸಂಬಂಧಿಸಿದ ಒಂದು ತುಂಡು ಜಾಗವೂ ಇಲ್ಲ. ಬೇಷರತ್‌ ಕ್ಷಮೆಗೆ ನೋಟಿಸ್‌ ಕಳುಹಿಸಿದ್ದೇವೆ. ಕ್ಷಮೆಯಾಚಿಸದಿದ್ದರೆ ಕಾನೂನು ಸಂಕಷ್ಟ ಎದುರಿಸಬೇಕಾಗುತ್ತದೆ. ಅಷ್ಟು ಸುಲಭವಾಗಿ ಅವರನ್ನು ಬಿಡುವ ಮಾತೇ ಇಲ್ಲ. ಇನ್ನು ಮುಂದೆ ಲಕ್ಷ್ಮಣ್‌ ಹೇಳಿಕೆಗೆ ಪ್ರತಿಕ್ರಿಯೆ ನೀಡುವುದೇ ಇಲ್ಲ. ಏನಿದ್ದರೂ ಕಾನೂನಿನ ಮೂಲಕ ಉತ್ತರ ನೀಡುತ್ತೇನೆ ಎಂದರು.

 

Tags:
error: Content is protected !!