Mysore
21
overcast clouds

Social Media

ಗುರುವಾರ, 13 ಆಗಸ್ಟ್ 2026
Light
Dark

ರಂಗಭೂಮಿ ಕಲಾವಿದರಿಂದ ಅರ್ಜಿ ಆಹ್ವಾನ

ಮೈಸೂರು: ಮೈಸೂರು ರಂಗಾಯಣ ಸಂಸ್ಥೆಯಿಂದ ಸಿದ್ಧಪಡಿಸುವ ನಾಟಕಗಳಿಗೆ ಹಾಗೂ ರಂಗ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ರಂಗಭೂಮಿಯಲ್ಲಿ ಅನುಭವವಿರುವ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ರಾಷ್ಟ್ರೀಯ ನಾಟಕ ಶಾಲೆಯ ಪದವಿ/ರಾಜ್ಯದ ಯಾವುದೇ ರಂಗಶಿಕ್ಷಣ ಕೇಂದ್ರದಿಂದ ರಂಗಶಿಕ್ಷಣ ಪದವಿ/ಡಿಪ್ಲೊಮಾ ಪಡೆದವರಾಗಿರಬೇಕು. ರಂಗಭೂಮಿ ಅನುಭವ ಕಡ್ಡಾಯವಾಗಿದ್ದು, 22 ರಿಂದ 35 ವರ್ಷದೊಳಗಿನ ವಯೋಮಿತಿಯುಳ್ಳ ಕಲಾವಿದರನ್ನು ರಂಗಾಯಣದ ನಿಯಮಾನುಸಾರ ತಾತ್ಕಾಲಿಕವಾಗಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಆಸಕ್ತರು ಅರ್ಜಿ ನಮೂನೆಯನ್ನು ರಂಗಾಯಣದ ವೆಬ್‌ಸೈಟ್ www.rangayanamysore.karnataka.gov.in ನಿಂದ ಡೌನ್ ಲೋಡ್ ಮಾಡಿಕೊಂಡು ಆಗಸ್ಟ್ 28 ರೊಳಗೆ ವಿನೋಬಾ ರಸ್ತೆಯಲ್ಲಿರುವ ರಂಗಾಯಣದ ನಿರ್ದೇಶಕರ ವಿಳಾಸಕ್ಕೆ ಅರ್ಜಿ ಸಲ್ಲಿಸಬೇಕು ಎಂದು ರಂಗಾಯಣದ ಉಪನಿರ್ದೇಶಕರಾದ ಡಾ.ಎಂ.ಡಿ.ಸುದರ್ಶನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:
error: Content is protected !!