Mysore
25
scattered clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ಲೈಂಗಿಕ ದೌರ್ಜನ್ಯ: ಪ್ರಜ್ವಲ್‌ ರೇವಣ್ಣ ವಿರುದ್ಧ ಮೊದಲ ಜಾರ್ಚ್‌ಶೀಟ್‌ ಸಲ್ಲಿಕೆ

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ದಾಖಲಾಗಿದ್ದ ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಎಸ್‌ಐಟಿ ಅಧಿಕಾರಿಗಳು 2,144 ಪುಟಗಳ ದೋಷಾರೋಪ ಪಟ್ಟಿಯನ್ನು 42ನೇ ಜನಪ್ರತಿನಿಧಿ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಕುರಿತಂತೆ ಪ್ರಜ್ವಲ್‌ ರೇವಣ್ಣ ವಿರುದ್ಧ ಹಾಸನದ ಹೊಳೆನರಸೀಪುರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿ ಸುಮಾರಾಣಿ ಅವರು 137 ಸಾಕ್ಷಿಗಳ ಹೇಳಿಕೆ ಸೇರಿ 2144 ಪುಟಗಳ ದೋಷಾರೋಪ ಪಟ್ಟಿಯನ್ನು 42ನೇ ವಿಶೇಷ ಜನಪ್ರತಿನಿಗಳ ಕೋರ್ಟ್‌ಗೆ ಎಸ್‌ಐಟಿ ಸಲ್ಲಿಕೆ ಮಾಡಿದ್ದಾರೆ.

ಇನ್ನು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಜುಲೈ 24ರಂದು ವಜಾಗೊಂಡಿತ್ತು. ಸದ್ಯ ಆರೋಪಿ ಪ್ರಜ್ವಲ್‌ ರೇವಣ್ಣ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದಾರೆ.

ಏನಿದು ಪ್ರಕರಣ?
ಅತ್ಯಾಚಾರ, ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನದ ಭೀತಿಯಿಂದ 35 ದಿನ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಪ್ರಜ್ವಲ್‌ ರೇವಣ್ಣ ಮೂರು ತಿಂಗಳ ಹಿಂದೆ ಬೆಂಗಳೂರಿಗೆ ವಾಪಸಾದಾಗ ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದರು.

ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಅದನ್ನು ಚಿತ್ರೀಕರಿಸಿದ ಆರೋಪ ಪ್ರಜ್ವಲ್‌ ವಿರುದ್ದ ಕೇಳಿ ಬಂದಿದೆ. ಆರೋಪಿ ಪ್ರಜ್ವಲ್‌ ರೇವಣ್ಣ ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಇನ್ನು ಇನ್ನೊಂದು ಕಡೆ ಹೆಚ್​ಡಿ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕೂಡ ಚಾರ್ಜ್​ಶೀಟ್​ ಸಲ್ಲಿಸಲಾಗಿದೆ. ಹೊಳೆನರಸೀಪುರ ಟೌನ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದವು.

ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ ಪ್ರಕರಣ, ಕೆ.ಆರ್.ನಗರದ ಕಿಡ್ನ್ಯಾಪ್‌ ಪ್ರಕರಣದಲ್ಲಿ ಅರೆಸ್ಟ್‌ ಆಗಿದ್ದ ಪ್ರಜ್ವಲ್‌ರನ್ನ ಎಸ್‌ಐಟಿ ಕಸ್ಟಡಿಗೆ ಪಡೆದಿತ್ತು. ಈ ಎರಡೂ ಕೇಸ್‌ಗಳಲ್ಲಿ ವಿಚಾರಣೆ ಮುಗಿದಿರೋ ಕಾರಣಕ್ಕೆ ಪ್ರಜ್ವಲ್‌ ರೇವಣ್ಣರನ್ನ ನ್ಯಾಯಾಂಗ ಬಂಧನಕ್ಕೆ ನೀಡಲಾಗಿತ್ತು.

ಇನ್ನು ಮೈಸೂರು ಜಿಲ್ಲೆಯ ಕೆಆರ್​ ನಗರ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್​ಡಿ ರೇವಣ್ಣ ಮತ್ತು ಭವಾನಿ ರೇವಣ್ಣ ಸೇರಿದಂತೆ 9 ಆರೋಪಿಗಳಿಗೆ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್​ನಿಂದ ಸಮನ್ಸ್​ಜಾರಿ ಮಾಡಲಾಗಿದೆ.

Tags: