Mysore
26
scattered clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

ಬೆಳ್ಳಂಬೆಳಗ್ಗೆ ನಿವೃತ್ತಿ ಘೋಷಿಸಿ, ಅಭಿಮಾನಿಗಳಿಗೆ ಶಾಕ್‌ ಕೊಟ್ಟ ಟೀಂ ಇಂಡಿಯಾ ಸ್ಟಾರ್‌ ಕ್ರಿಕೆಟಿಗ..

ಒಂದು ಕಾಲದಲ್ಲಿ ಟೀಮ್‌ ಇಂಡಿಯಾದ ಆರಂಭಿಕ ಆಟಗಾರ, ರನ್‌ಗಳ ಮಳೆ ಹರಿಸಿದ್ದ ಎಡಗೈ ಬ್ಯಾಟರ್‌ ಶಿಖರ್‌ ಧವನ್‌ ಅಂತರರಾಷ್ಟ್ರೀಯ ಮತ್ತು ದೇಶಿಯ ಕ್ರಿಕೆಟ್‌ಗೆ ವಿಧಾಯ ಹೇಳಿದ್ದಾರೆ . ಗಬ್ಬರ್‌ ಸಿಂಗ್‌ ಎಂದೇ ಖ್ಯಾತಿ ಪಡೆದಿದ್ದ ಧವನ್‌, ಹಲವು ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ದಾಖಲೆಗಳನ್ನು ಬರೆದಿದ್ದಾರೆ. ಆದರೆ, ಕಳೆದ ಎರಡು ವರ್ಷಗಳಿಂದ ತಂಡದಲ್ಲಿ ಅವರು ಸ್ಥಾನ ಪಡೆದಿರಲಿಲ್ಲ.

ಈ ಬಗ್ಗೆ ತಮ್ಮ ಎಕ್ಸ್‌ ಖಾತೆಯಲ್ಲಿ ನಿವೃತ್ತಿ ಘೋಷಿಸಿರುವ ಧವನ್‌, ನಾನು ನನ್ನ ಕ್ರಿಕೆಟ್‌ ಅಧ್ಯಾಯವನ್ನು ಕೊನೆಗೊಳಿಸುತ್ತಿದ್ದೇನೆ. ಅಸಂಖ್ಯಾತ ನೆನಪುಗಳು ಮತ್ತು ಕೃತಜ್ಞತೆಗಳನ್ನು ನಾನು ಹೊತ್ತುಕೊಂಡು ಹೋಗುತ್ತಿದ್ದೇನೆ. ನಿಮ್ಮ ಪ್ರೀತಿ ಮತ್ತು ಬೆಂಬಲಕ್ಕಾಗಿ ಧನ್ಯಾದಗಳು. ಜೈ ಹಿಂದ್! ಎಂದು ಬರೆದುಕೊಂಡಿದ್ದಾರೆ.

ಜೀವನದಲ್ಲಿ ಮುಂದುವರಿಯಲಿ ಪುಟವನ್ನು ತಿರುಗಿಸುವುದು ಮುಖ್ಯ. ಅದಕ್ಕಾಗಿಯೇ ನಾನು ಅಂತರರಾಷ್ಟ್ರೀಯ ಮತ್ತು ದೇಶಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸುತ್ತಿದ್ದೇನೆ. ನೆಮ್ಮದಿಯಿಂದ ನಿರ್ಗಮಿಸುತ್ತಿದ್ದೇನೆ ಎಂದು ಹೇಳಿದ್ದಾರೆ.

2010ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಏಕದಿನ ಪಂದ್ಯದ ಮೂಲಕ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದ ಧವನ್‌, ಮೂರು ಮಾದರಿಯ ಕ್ರಿಕೆಟ್‌ನಲ್ಲಿ ಭಾರತವನ್ನು ಪ್ರತಿನಿಧಿಸಿದ್ದರು.

ಶಿಖರ್‌ ಧವನ್‌ ಈವರೆಗೆ ಭಾರತದ ಪರ 34 ಟೆಸ್ಟ್‌, 167ಒಡಿಐ ಹಾಗೂ 67 ಟಿ-20 ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ. ಏಕದಿನ ಮಾದರಿಯ ಆಟಗಳಲ್ಲಿ 44.11 ಸರಾಸರಿಯಲ್ಲಿ 6793 ರನ್‌ಗಳಿಸಿದ್ದಾರೆ. ಟೆಸ್ಟ್‌ ಕ್ರಿಕೆಟ್‌ನಲ್ಲಿ 40.61ರ ಸರಾಸರಿಯಲ್ಲಿ 2315 ರನ್‌ ಗಳಿಸಿದ್ದಾರೆ.

 

 

 

Tags: