ತಮಿಳುನಾಡು: ತಮಿಳು ನಟ ದಳಪತಿ ವಿಜಯ್ ಅವರು, ತಮಿಳುನಾಡು ವಿಧಾನಸಭಾ ಚುನಾವಣೆಗೆ ಸರ್ವ ರೀತಿಯಲ್ಲೂ ಸಿದ್ಧತೆ ಕೈಗೊಂಡಿದ್ದಾರೆ.
ಚುನಾವಣೆಗೆ ಸಿದ್ಧತೆ ಆರಂಭಿಸಿರುವ ವಿಜಯ್ ಅವರು, ಪಕ್ಷ ಚಿಹ್ನೆಯನ್ನು ಸಹ ಬಿಡುಗಡೆ ಮಾಡಿದ್ದಾರೆ. ಕಳೆದ ಫೆಬ್ರವರಿಯಲ್ಲಿ ನಟ ವಿಜಯ್ ತಮಿಳಗ ವೆಟ್ರಿ ಕಳಗಂ ಎಂಬ ರಾಜಕೀಯ ಪಕ್ಷದ ಹೆಸರನ್ನು ಅನೌನ್ಸ್ ಮಾಡಿದ್ದರು.
ಈಗ ಪಕ್ಷದ ಭಾವುಟ ಮತ್ತು ಚಿಹ್ನೆಯನ್ನು ಅನೌನ್ಸ್ ಮಾಡಿ 2026ರಲ್ಲಿ ನಡೆಯುವ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಾಗಿ ಘೋಷಿಸಿದ್ದಾರೆ.
ಈ ಮೂಲಕ ತಮಿಳುನಾಡಿನಲ್ಲಿ ಮತ್ತೊಂದು ಹೊಸ ಮೈಲಿಗಲ್ಲು ಪ್ರಾರಂಭವಾಗಿದ್ದು, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ದಳಪತಿ ವಿಜಯ್ ಮ್ಯಾಜಿಕ್ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.
ತಮಿಳುನಾಡು ಸೇರಿದಂತೆ ದೇಶದಲ್ಲಿ ಅಪಾರ ಅಭಿಮಾನಿ ಬಳಗವನ್ನು ಹೊಂದಿರುವ ನಟ ದಳಪತಿ ವಿಜಯ್ ಅವರು ಈಗ ರಾಜಕೀಯಕ್ಕೆ ಎಂಟ್ರಿಯಾಗಿರುವುದು ಬಹಳ ಕುತೂಹಲಕ್ಕೆ ಕಾರಣವಾಗಿದೆ.