Mysore
26
few clouds

Social Media

ಶನಿವಾರ, 03 ಅಕ್ಟೋಬರ್ 2026
Light
Dark

ರಾಜ್ಯದ ಜನತೆಗೆ ಮತ್ತೊಂದು ಶಾಕ್: ಬಸ್‌ ಪ್ರಯಾಣ ದರ ಏರಿಕೆ ಖಚಿತ

ಬೆಂಗಳೂರು: ನೀರಿನ ಬಿಲ್‌ ಏರಿಕೆ ಮಾಡುವುದಾಗಿ ಶಾಕ್‌ ನೀಡಿದ್ದ ರಾಜ್ಯ ಸರ್ಕಾರ ಈಗ ಜನತೆಗೆ ಮತ್ತೊಂದು ಶಾಕ್‌ ನೀಡಿದೆ.

ಕೆಎಸ್‌ಆರ್‌ಟಿಸಿ ಬಸ್‌ ಟಿಕೆಟ್‌ ದರ ಏರಿಕೆ ಮಾಡುವ ಸುಳಿವನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನೀಡಿದ್ದು, ಜನತೆಗೆ ಮತ್ತೊಂದು ಶಾಕ್‌ ಎದುರಾಗಿದೆ.

ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ ಮಾದರಿಯಲ್ಲೇ ಸಾರಿಗೆ ನಿಗಮಗಳಲ್ಲಿ ಪ್ರಯಾಣದ ದರ ಏರಿಕೆ ನಿರ್ಧಾರಗಳನ್ನು ಕೈಗೊಳ್ಳಲು ಪ್ರತ್ಯೇಕ ನಿಯಂತ್ರಣ ಆಯೋಗ ರಚನೆಗೆ ಸರ್ಕಾರ ಮುಂದಾಗಿದೆ ಎಂಬ ವರದಿಯನ್ನು ಉಲ್ಲೇಖಿಸಿ ಕಿಡಿಕಾರಿದ್ದ ಅಶೋಕ್‌ ಬಗ್ಗೆ ಮಾತನಾಡಿದ ರಾಮಲಿಂಗಾರೆಡ್ಡಿ ಅವರು, ಅಶೋಕ್‌ ಅವರೇ ನೀವು ಸಾರಿಗೆ ಇಲಾಖೆ ಸಚಿವರಾಗಿದ್ದವರು. ಸಾರಿಗೆ ಸಂಸ್ಥೆಗಳ ಬಗ್ಗೆ ತಿಳಿದೂ ಕೂಡ ಈ ರೀತಿ ಮಾತನಾಡುತ್ತಿದ್ದೀರಿ ಎಂದರೆ ಆಶ್ಚರ್ಯವಾಗುತ್ತಿದೆ ಎಂದು ಕಿಡಿಕಾರಿದರು.

Tags:
error: Content is protected !!